ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ಇಂದು ಮಹತ್ವದ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಈ ವೇಳೆ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಶುಭ ಸುದ್ದಿ ನೀಡಿದ್ದಾರೆ.
ಉನ್ನತ ಶಿಕ್ಷಣ ಪಡೆಯಲು ಇರುವ ಭಾಷೆಯ ತೊಡಕು ನಿವಾರಿಸುವ ಹಿನ್ನೆಲೆಯಲ್ಲಿ ಕರ್ನಾಟಕದ ಎಲ್ಲಾ ವಿವಿಗಳಲ್ಲಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅನುವಾಗುವಂತೆ ರೆಫರೆನ್ಸ್ ಪುಸ್ತಕಗಳನ್ನು ಹಾಗೂ ಪಠ್ಯ ವಿಷಯಗಳನ್ನು ಭಾಷಾಂತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.