ಜುಲೈ 16ರಿಂದ ಗೃಹ ಲಕ್ಮಿ ಕಾರ್ಯಕ್ರಮಕ್ಕೆ ಅರ್ಜಿ ನೋಂದಣಿ ಶುರು: ಸಿಎಂ ಸಿದ್ದರಾಮಯ್ಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಜುಲೈ 16ರಂದು ಗೃಹ ಲಕ್ಮಿ ಕಾರ್ಯಕ್ರಮಕ್ಕೆ ಅರ್ಜಿ ನೋಂದಣಿ ಶುರುವಾಗಲಿದ್ದು, ಆಗಸ್ಟ್‌ 15 , 16ರಂದು ಖಾತೆಗೆ ಹಣ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಬಜೆಟ್‌ ಮಂಡನೆ ಮುಗಿಸಿದ ಬೆನ್ನಲೇ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಈ ಬಜೆಟ್‌ ಐದು ಗ್ಯಾರಂಟಿಗಳು ಮತ್ತು ನಮ್ಮ ಚುನಾವಣಾ ಪ್ರಣಾಳಿಕೆಗಳಲ್ಲಿ ತಿಳಿಸಿದ್ದ ಭರವಸೆಗಳನ್ನು ಒಳಗೊಂಡಿದೆ. ಇದು ಗ್ಯಾರಂಟಿ ಬಜೆಟ್‌ ಆಗಿದೆ ಅಂತ ತಿಳಿಸಿದರು.

ನಾನು ಮಂಡನೆ ಮಾಡಿರುವ ಬಜೆಟ್‌ ಪೂರ್ಣ ಪ್ರಮಾಣದ ಬಜೆಟ್‌ ಆಗಿದೆ. ಗ್ಯಾರಂಟಿಗಳನ್ನು ಜಾರಿ ಮಾಡುವ ಬಗ್ಗೆ ಹೇಳಿದ್ದೆ, ಅದೇ ರೀತಿ ಈಗ ನಡೆದುಕೊಳ್ಳುತ್ತಿದ್ದೇವೆ. ಎಲ್ಲಾ ಗ್ಯಾರಂಟಿಗಳಿಗೆ ಹಣವನ್ನು ಒದಗಿಸಿದ್ದೇವೆ. ರಾಜ್ಯ ದಿವಾಳಿ ಆಗದೇ ಎಚ್ಚರ ವಹಿಸಿದ್ದೇವೆ. ಅದರ ಜೊತೆಗೆ ಬಜೆಟ್‌ ಮಂಡಿಸಿ ಇದರ ಜೊತೆಗೆ ಎಪ್ಪತ್ತಾರು ಕಾರ್ಯಕ್ರಮಗಳನ್ನು ಜಾರಿ ಮಾಡುವುದಾಗಿ ಬಜೆಟ್‌ನಲ್ಲಿ ಉಲ್ಲೇಖ ಮಾಡಲಾಗಿದ್ದು, ಅದಕ್ಕೆ ಹಣವನ್ನು ಕೂಡ ನಿಗದಿ ಪಡಿಸಲಾಗಿದೆ ಅಂತ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!