ಹೊಸ ದಿಗಂತ ಡಿಜಿಟಲ್ ಡೆಸ್ಕ್
ಮಂಜು ಆವರಿಸಿದ ಪರಿಣಾಮ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಎರಡು ಕೆಎಸ್ ಆರ್ ಟಿಸಿ ಬಸ್ಸುಗಳ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಚಾಲಕರ ಕಾಲುಗಳಿಗೆ ತೀವ್ರ ಗಾಯಗಳಾಗಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತಕ್ಕೀಡಾದ ಬಸ್ಸುಗಳಲ್ಲಿ 80ಕ್ಕೂ ಹೆಚ್ಚು ಜನ ಪ್ರವಾಸಿಗರು ಇದ್ದರು. ಅಪಘಾತಕ್ಕೆ ರಸ್ತೆ ಕಾಮಾಗಾರಿಯೇ ಕಾರಣ ಎಂದು ಹೇಳಲಾಗುತ್ತಿದೆ. 2019ರಲ್ಲಿ ಕುಸಿದಿದ್ದ ರಸ್ತೆ ಕಾಮಗಾರಿ ಇನ್ನೂ ಪೂರ್ಣವಾಗದೇ ಇರುವುದರಿಂದ ಆಕ್ರೋಶಗೊಂಡಿರುವ ವಾಹನ ಸವರಾರರು, ಕಾಮಗಾರಿ ಕೂಡಲೇ ಮುಗಿಸುವಂತೆ ಆಗ್ರಹಿಸಿದ್ದಾರೆ.
ಅಪಘಾತಕ್ಕೆ ಚಾರ್ಮಾಡಿ ಘಾಟಿಯ ಮಂಜು ಕೂಡ ಕಾರಣವಾಗಿದೆ. ಪರಿಣಾಮ ಚಾರ್ಮಾಡಿ ಘಾಟಿಯಲ್ಲಿ ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವರಾರರು ಪರದಾಟ ನಡೆಸುವಂತಾಯಿತು.