ಹೊಸದಿಗಂತ ಡಿಜಿಟಲ್ ಡೆಸ್ಕ್:
ಆದಿಪುರುಷ ಸಿನಿಮಾದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದ್ದು, ಸಿನಿಮಾ ಬ್ಯಾನ್ ಮಾಡುವಂತೆ ಅನೇಕರು ಸ್ವರ ಎತ್ತಿದ್ದು,ಆ ಬಳಿಕ ಸೈಲೆಂಟ್ ಆಗಿತ್ತು. ಇದೀಗ ಸಿನಿಮಾದ ಸಂಭಾಷಣೆಯನ್ನು ಬರೆದ ಮನೋಜ್ ಮುಂತಾಶಿರ್ (Manoj Muntashir) ಅವರು ಕ್ಷಮೆ ಕೋರಿದ್ದಾರೆ.
ಈ ಹಿಂದೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿರಲ್ಲ. ಸಿನಿಮಾ ಕೋರ್ಟ್ ಕಟಕಟೆ ಏರಿತ್ತು. ಅಲ್ಲಿ ಅಲಹಾಬಾದ್ (Allahabad) ಹೈಕೋರ್ಟ್ ಚಿತ್ರತಂಡಕ್ಕೆ ಛೀಮಾರಿ ಹಾಕಿತ್ತು.
ಇದೀಗ ಕೋರ್ಟ್ ಬಿಸಿ ತಾಗುತ್ತಿದ್ದಂತೆಯೇ ಬರಹಗಾರ ಮನೋಜ್ ಟ್ವೀಟ್ ಮಾಡಿದ್ದಾರೆ.
ತಮ್ಮಿಂದ ಚಿತ್ರದಲ್ಲಿ ತಪ್ಪಾಗಿದೆ ಎಂದು ಒಪ್ಪಿಕೊಂಡಿರುವ ಮನೋಜ್, ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ್ದಕ್ಕೆ ಜನರಲ್ಲಿ ಕ್ಷಮೆ ಕೇಳಿದ್ದಾರೆ. ಜನರಿಗೆ ನೋವು ಆಗಿದ್ದನ್ನು ಒಪ್ಪಿಕೊಳ್ಳುತ್ತೇನೆ. ನಾನು ಎರಡೂ ಕೈಗಳನ್ನು ಮುಗಿದು ಕ್ಷಮೆ ಕೇಳುತ್ತೇನೆ. ಪ್ರಭು ಬಜರಂಗ ಬಲಿ ನಮಗೆ ಮತ್ತಷ್ಟು ಶಕ್ತಿ ನೀಡಲಿ. ಪವಿತ್ರ ಸನಾತನ ಹಾಗೂ ನಮ್ಮ ರಾಷ್ಟ್ರ ಸೇವೆ ಮಾಡಲು ಮತ್ತಷ್ಟು ಶಕ್ತಿ ತುಂಬಲಿ ಎಂದು ಅವರು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.
ಈ ಹಿಂದೆ ಆದಿಪುರುಷ (Adipurush) ಸಿನಿಮಾವನ್ನು ನೇಪಾಳ ಸರಕಾರ ಬ್ಯಾನ್ ಮಾಡಿತ್ತು.