ಗ್ರಾಹಕರಿಗೆ ತರಕಾರಿ ಬಿಸಿ: ಟೊಮೆಟೊ 250 ರೂ., ಮೆಣಸಿನಕಾಯಿ 170 ರೂ.!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೇಶದಲ್ಲಿ ದಿನೇ ಡೈನ್ಟೊಮೆಟೊ (Tomato) ಬೆಲೆ ಏರಿಕೆಯಾಗುತ್ತಿದ್ದು, ಇದರ ಜೊತೆಗೆ ಮೆಣಸಿನಕಾಯಿ (Green Chilli) ಬೆಲೆ ಏರುತ್ತಿದೆ.

ಬೇಸಿಗೆಯ ಬಿಸಿಲು ಹಾಗೂ ಮುಂಗಾರು ಮಳೆ ತಡವಾಗಿದ್ದರಿಂದ ಮೆಣಸಿನಕಾಯಿ ಬೆಲೆಯಲ್ಲಿ (Chilli Price Hike) ಏರಿಕೆ ಕಂಡಿದೆ. ಕಳೆದ ತಿಂಗಳು 60 ರೂ.ಗಳ ಆಸುಪಾಸಿನಲ್ಲಿದ್ದ ಹಸಿರು ಮೆಣಸಿನಕಾಯಿ ಈಗ ಪ್ರತಿ ಕೆಜಿಗೆ 170 ರೂ.ಗಳಿಗೆ ಏರಿಕೆಯಾಗಿದೆ. ಇದರ ಜೊತೆಗೆ ಟೊಮೆಟೊ ಬೆಲೆ ಏರಿಕೆಯೂ ಮುಂದುವರಿದಿದೆ.

ಉತ್ತರಾಖಂಡ ರಾಜ್ಯದ ಗಂಗೋತ್ರಿ, ಯಮುನೋತ್ರಿಯಲ್ಲಿ ಪ್ರತಿ ಕೆಜಿ ಟೊಮೆಟೊ ಬೆಲೆ 250 ರೂ. ಏರಿಕೆಯಾಗಿದೆ. ಉತ್ತರಕಾಶಿಯಲ್ಲಿ ಪ್ರತಿ ಕೆಜಿ ಟೊಮೆಟೊ ಬೆಲೆ 200 ರೂ. ತಲುಪಿದ್ದು, ಕೋಲ್ಕತ್ತಾದಲ್ಲಿ 152 ರೂ., ದೆಹಲಿಯಲ್ಲಿ 120 ರೂ., ಚೆನ್ನೈನಲ್ಲಿ 117 ರೂ., ಮುಂಬೈನಲ್ಲಿ 108 ರೂಪಾಯಿಗೆ ಮಾರಾಟವಾಗುತ್ತಿದೆ. ಬೆಂಗಳೂರಿನಲ್ಲೂ 100 ರಿಂದ 130 ರೂ.ವೆರೆಗೆ ಮಾರಾಟವಾಗುತ್ತಿದೆ. ಇದರೊಂದಿಗೆ ಶುಂಠಿ ಹಾಗೂ ಹೂಕೋಸಿನ ಬೆಲೆಯೂ ಹೆಚ್ಚಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!