ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದ ಹಲವು ಕಡೆ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚಾಗಿದೆ. ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, ಸರ್ವ ಜನಾಂಗದ ಶಾಂತಿಯ ತೋಟ ನಿರ್ಮಿಸಲು ಯತ್ನಿಸುತ್ತಿದ್ದೇವೆ ಎಂದು ಹೇಳಿದರು.
ಈ ವೇಳೆ ಶೀಘ್ರದಲ್ಲೇ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಎಂದು ಹೇಳಿದ ಸಿಎಂ ಸಿದ್ದರಾಮಯ್ಯ , ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ ನಡೆಸಲಾಗುತ್ತದೆ. ಹಂತ ಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ, ಆದಷ್ಟು ಬೇಗ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ ಎಂದು ಹೇಳಿದರು.