ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆ ಮತದಾನ ವೇಳೆ ಸಂಭವಿಸಿದ ವ್ಯಾಪಕ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.
ಇಂದು ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗುತ್ತಿದ್ದಂತೆ ನಾಡಿಯಾ, ಮುರ್ಷಿದಾಬಾದ್ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಮೂವರು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಕೂಚ್ ಬೆಹಾರ್ನಲ್ಲಿ ಬಿಜೆಪಿ ಮತಗಟ್ಟೆ ಏಜೆಂಟ್ನನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಪೂರ್ವ ಬುರ್ದ್ವಾನ್ ಜಿಲ್ಲೆಯಲ್ಲಿ ನಿನ್ನೆ ಸಂಜೆ ತೀವ್ರವಾಗಿ ಗಾಯಗೊಂಡಿದ್ದ ಸಿಪಿಐ(ಎಂ) ಕಾರ್ಯಕರ್ತ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕೆಲ ಬೂತ್‌ಗಲ್ಲಿ ಮತಪೆಟ್ಟಿಗೆಯನ್ನು ಹೊತ್ತೊಯ್ದಿದ್ದಾರೆ. ಹಲವು ಬೂತ್‌ಗಳಲ್ಲಿ ಹಿಂಸಾಚಾರ ಹೆಚ್ಚಾಗಿದ್ದರೆ, ಕೆಲವೆಡೆ ಬಾಂಬ್ ದಾಳಿ, ಗುಂಡಿನ ದಾಳಿಯೂ ನಡೆದಿದೆ.
ಗಲಭೆ, ಹಿಂಸಾಚಾರ, ಸಾವು ನೋವಿಗೆ ಬಿಜೆಪಿ ಆಡಳಿತರೂಢ ಟಿಎಂಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಟಿಎಂಸಿ ಗೂಂಡಾಗಳು ಚುನಾವಣೆ ಗೆಲ್ಲಲು ಬಂದೂಕು, ಬಾಂಬ್ ಪ್ರಯೋಗಿಸುತ್ತಿದ್ದಾರೆ. ಇದರಿಂದ ಪಶ್ಚಿಮ ಬಂಗಾಳದ ಬಹುತೇಕ ಕಡೆ ಟಿಎಂಸಿ ಗೂಂಡಾಗಳಿಗೆ ಭಾರಿ ಹಿಂಸಾಚಾರವಾಗಿದೆ ಎಂದು ಬಿಜೆಪಿ ಹೇಳಿದೆ.
ಪಶ್ಚಿಮ ಬಂಗಾಳದಲ್ಲಿ ಇಂದು ಒಂದೇ ಹಂತದಲ್ಲಿ ಜಿಲ್ಲೆ, ತಾಲೂಕು ಮತ್ತು ಗ್ರಾಮ ಪಂಚಾಯತ್ ಚುನಾವಣೆಗಳನ್ನು ನಡೆಸಲಾಗಿದೆ. ಸುಮಾರು 5.67 ಕೋಟಿ ಜನರು ಮತದಾನದ ಹಕ್ಕು ಪಡೆದಿದ್ದಾರೆ. ನ್ನು ಪ್ರಚಾರದ ವೇಳೆಯೂ ವ್ಯಾಪಕ ಹಿಂಸಾಚರ ನಡೆದಿತ್ತು. ಚುನಾವಣೆ ಸಮಯದಲ್ಲಿ ಇಡೀ ರಾಜ್ಯದಲ್ಲಿ ಹಿಂಸಾಚಾರ ತಡೆಗಟ್ಟಲು ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಪ್ರಮುಖವಾಗಿ ಸೇನೆ ನಿಯೋಜನೆ ಮಾಡಿಲ್ಲ. ಇದು ಹಿಂಸಾಚಾರಕ್ಕೆ ಪ್ರಮುಖ ಕಾರಣವಾಗಿದೆ.
65 ಸಾವಿರ ಕೇಂದ್ರೀಯ ಪೊಲೀಸ್ ಪಡೆ ಮತ್ತು 70 ಸಾವಿರ ರಾಜ್ಯ ಪೊಲೀಸ್ ಪಡೆಯನ್ನು ನೇಮಕ ಮಾಡಲಾಗಿದೆ. ಆದರೆ ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ಪೊಲೀಸರ ಕೈಕಟ್ಟಲಾಗಿದೆ. ಇಷ್ಟೇ ಅಲ್ಲ ಸಿಎಂ ಸೂಚನೆಯಂತೆ ಗಲಭೆ ಹತ್ತಿಕ್ಕುವ ಬದಲು ಪೊಲೀಸರು ಮೌನವಾಗಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.