ಕಲಘಟಗಿ ಮಾಜಿ ಶಾಸಕ ಸಿ.ಎಂ ನಿಂಬಣ್ಣವರ್ ವಿಧಿವಶ

ಹೊಸದಿಗಂತ ವರದಿ ಹುಬ್ಬಳ್ಳಿ:

ಧಾರವಾಡ ಜಿಲ್ಲೆಯ ಕಲಘಟಗಿ ಕ್ಷೇತ್ರದ ಮಾಜಿ ಶಾಸಕ ಸಿ.ಎಂ. ನಿಂಬಣ್ಣವರ್ (75) ಅನಾರೋಗ್ಯದಿಂದ‌ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತಿದ್ದ ಮಾಜಿ ಶಾಸಕ ನಿಂಬಣ್ಣವರ್ 2018 ರಲ್ಲಿ ಬಿಜೆಪಿ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಕಲಘಟಗಿ ತಾಲೂಕಿನ ಸಂಗೇದೇವರಕೊಪ್ಪ ಗ್ರಾಮದಲ್ಲಿ 1947ರಲ್ಲಿ ರೈತ ಕುಟುಂಬದಲ್ಲಿ ಜನಿಸಿದ್ದರು.

ಕಳೆದ 15 ದಿನಗಳಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ 5 ದಿನಗಳ ಹಿಂದೆ ಓಪನ್ ಸರ್ಜರಿ ಸಹ ಆಗಿತ್ತು ಎಂದು ಅವರ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!