ಜೈನಮುನಿ ಕಾಮಕುಮಾರ ನಂದಿ ಮಹಾರಾಜ್‌ ಪಂಚಭೂತಗಳಲ್ಲಿ ಲೀನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭೀಕರವಾಗಿ ಹತ್ಯೆಗೀಡಾದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರು ಪಂಚಭೂತಗಳಲ್ಲಿ ಲೀನರಾದರು.

ಹಿರೇಕೋಡಿಗೆ ಗ್ರಾಮದ ನಂದಿಪರ್ವತ ಆಶ್ರಮದ ಪಕ್ಕದ ಜಮೀನಿನಲ್ಲಿ ಜೈನ ಸಂಪ್ರದಾಯದಂತೆ ಜೈನ ಮಠಗಳ ಮಹಾಸ್ವಾಮಿಗಳ ನೇತೃತ್ವದಲ್ಲಿ ಜೈನಮುನಿ ಸ್ವಾಮೀಜಿಗಳ ಅಂತ್ಯಕ್ರಿಯೆ ನಡೆಯಿತು.

ಜೈನಮುನಿ ಅವರ ಪೂರ್ವಾಶ್ರಮದ ಅಣ್ಣನ ಮಗ, ಆಶ್ರಮದ ಟ್ರಸ್ಟ್ ಅಧ್ಯಕ್ಷ ಭೀಮಗೊಂಡ ಉಗಾರೆ ಅಗ್ನಿಸ್ಪರ್ಶ ಮಾಡಿದರು. ನಾಂದಣಿ ಮಠದ ಜಿನಸೇನ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿ ಸೇರಿದಂತೆ ಜೈನ ಮಠಗಳ ಮಹಾಸ್ವಾಮಿಗಳು ಭಾಗಿಯಾಗಿದ್ದರು. ಈ ವೇಳೆ ಭಕ್ತರು ನಮೋಕಾರ ಮಂತ್ರವನ್ನು ಪಠಿಸಿದರು.

ಜೈನ ಮುನಿ ಹತ್ಯೆ ಪ್ರಕರಣ ಸಂಬಂಧ ರಾಯಬಾಗ ತಾಲೂಕಿನ ಕಾಟಕಬಾವಿ ಗ್ರಾಮದ ನಾರಾಯಣ ಮಾಳಿ, ಹಸನ್ ಡಾಲಾಯತ್ ಎಂಬುವರನ್ನು ಬಂಧಿಸಲಾಗಿದೆ. ಪ್ರಕರಣ ದಾಖಲಾದ 4 ಗಂಟೆಗೊಳಗಾಗಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ಕೈಗೆತ್ತುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!