ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಫ್ಘಾನಿಸ್ತಾನ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭೂಕಂಪ ಸಂಭವಿಸಿದೆ. ಅಫ್ಘಾನಿಸ್ತಾನದ ಫೈಜಾಬಾದ್ ಪ್ರದೇಶದಲ್ಲಿ ಸೋಮವಾರ ಸಂಭವಿಸಿದ ಭೂಕಂಪವು ರಿಕ್ಟರ್ ಮಾಪಕದಲ್ಲಿ 4.4ರಷ್ಟು ತೀವ್ರತೆ ದಾಖಲಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರವು ಬಹಿರಂಗಪಡಿಸಿದೆ. 180 ಕಿಲೋಮೀಟರ್ ಆಳದಲ್ಲಿ ಸಂಭವಿಸಿದ ಭೂಕಂಪದಿಂದ ಆಫ್ಘನ್ ಜನರು ಭಯಭೀತರಾಗಿದ್ದರು. ತಾಲಿಬಾನ್ ಅಧಿಕಾರಿಗಳು ಈ ಭೂಕಂಪದಿಂದ ಯಾವುದೇ ಜೀವ ಅಥವಾ ಆಸ್ತಿ ಹಾನಿಯಾಗಿಲ್ಲ ಎಂದು ಹೇಳಿದ್ದಾರೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾನುವಾರ ರಾತ್ರಿ ಭೂಕಂಪ ಸಂಭವಿಸಿದೆ. ಅಂಡಮಾನ್ ದ್ವೀಪದ ಕ್ಯಾಂಪ್ ಬೆಲ್ ಬೇ ಪ್ರದೇಶದಲ್ಲಿ ಭೂಕಂಪ ಸಂಭವಿಸಿದ್ದು, ಜನರು ಭಯಭೀತರಾಗಿದ್ದಾರೆ. ಅಂಡಮಾನ್ ದ್ವೀಪದಲ್ಲಿ ಸಂಭವಿಸಿದ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 5.3ರಷ್ಟಿತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
70 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದ್ದು, ಜನ ಭಯದಿಂದಾಗಿ ಮನೆಯಿಂದ ಹೊರಬಂದಿದ್ದಾರೆ. ಈ ಭೂಕಂಪದಿಂದ ಕೆಲವು ತಾತ್ಕಾಲಿಕ ಮನೆಗಳಿಗೆ ಹಾನಿಯಾಗಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಪದೇ ಪದೇ ಭೂಕಂಪಗಳು ಸಂಭವಿಸುತ್ತಿರುವುದರಿಂದ ಜನರು ತೀವ್ರ ಭಯವನ್ನು ವ್ಯಕ್ತಪಡಿಸಿದ್ದಾರೆ.