ಅನ್ನಭಾಗ್ಯ ಯೋಜನೆಯಡಿ ಹಣ ವರ್ಗಾವಣೆಗೆ ಇಂದು ಸಿಎಂ ಚಾಲನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾಂಗ್ರೆಸ್‌ ಸರ್ಕಾರದ ಮೂರನೇ ಗ್ಯಾರಂಟಿ ʼಅನ್ನಭಾಗ್ಯʼ ಯೋಜನೆಯಡಿ ಹಣ ವರ್ಗಾವಣೆಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ಚುನಾವಣಾ ಪೂರ್ವದಲ್ಲಿ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಪ್ರತಿ ಮನೆಗೂ 10 ಕೆ.ಜಿ. ಅಕ್ಕಿ ಉಚಿತವಾಗಿ ನೀಡಲಾಗುವುದು ಎಂದು ಹೇಳಲಾಗಿತ್ತು. ಬಳಿಕ ಬಿಪಿಎಲ್ ಪಡಿತರದಾರರಿಗೆ ‍‍10ಕೆಜಿ ಅಕ್ಕಿ ಗ್ಯಾರಂಟಿ ಕೂಡ ಕಾಂಗ್ರೆಸ್​ ಘೋಷಿಸಿತ್ತು.

ಆದರೆ ಈಗ ಐದು ಕೆಜಿ ಅಕ್ಕಿ ಜತೆಗೆ ಉಳಿದ 5 ಕೆ.ಜಿ ಅಕ್ಕಿ ಬದಲಿಗೆ 170 ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಿದ್ದು, ಈ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಬಿಪಿಎಲ್ ಹಾಗೂ ಅಂತ್ಯೋದಯಪಡಿತರದಾರರಿಗೆ ಅನ್ನಭಾಗ್ಯ ಯೋಜನೆಯ ಹಣ ವರ್ಗಾವಣೆಯಾಗಲಿದೆ.

ಇಂದು ಸಂಜೆ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಯೋಜನೆಗೆ ಚಾಲನೆ ನೀಡಲಿದ್ದು, ಡಿಬಿಟಿ ಮೂಲಕ ಬಿಪಿಎಲ್ ಕುಟುಂಬದ ಪ್ರತಿ ವ್ಯಕ್ತಿಗೆ 170 ರೂ.ನಂತೆ ಕುಟುಂಬದ ಮುಖ್ಯಸ್ಥನ ಖಾತೆಗೆ ನೇರವಾಗಿ ಹಣ ವರ್ಗಾವಣೆ ಆಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!