ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಮರಾಜನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚುತ್ತಿದ್ದು, ಕಾಡಾನೆ ದಾಳಿಗೆ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾರೆ.
ಹನೂರು ತಾಲೂಕಿನ ಆಲದಕೆರೆ ಅರಣ್ಯ ಪ್ರದೇಶದಲ್ಲಿ ಕಾಡಾನೆ ದಾಳಿ ನಡೆಸಿದ್ದು, ಆನೆ ದಾಳಿಗೆ ಪ್ರಭುಲಿಂಗಸ್ವಾಮಿ ಎಂಬುವವರು ಮೃತಪಟ್ಟಿದ್ದಾರೆ.
ಪೊರಕೆ ಕಡ್ಡಿ ಸಂಗ್ರಹಕ್ಕೆ ಮಗ ಚಂದ್ರು ಜೊತೆ ಪ್ರಭುಲಿಂಗಸ್ವಾಮಿ ತೆರಳಿದ್ದರು. ಈ ವೇಳೆ ಏಕಾಏಕಿ ಕಾಡಾನೆ ದಾಳಿ ಮಾಡಿದ್ದು, ಪ್ರಭುಲಿಂಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.