ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬ್‌ನ ಅಂಬಾಲಾ-ಯಮುನಾನಗರ ರಸ್ತೆಯಲ್ಲಿ ಪ್ರವಾಹಕ್ಕೆ ಸಿಲುಕಿ ಬಸ್ ಮಗುಚಿದೆ. ಬಸ್ ನಿಂದ ಪ್ರಯಾಣಿಕರನ್ನು ಕ್ರೇನ್ ಸಹಾಯದಿಂದ ರಕ್ಷಿಸಲಾಗಿದೆ.
ಸುಮಾರು 27 ಪ್ರಯಾಣಿಕರು ಬಸ್ಸಿನಲ್ಲಿದ್ದರು ಎಂದು ಹೇಳಗುತ್ತಿದೆ.
ಉತ್ತರ ಭಾರತದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು (Rains), ಭೂಕುಸಿತದಿಂದಾಗಿ ಮನೆಗಳಿಗೆ ಹಾನಿ ಸಂಭವಿಸಿದೆ.ಪಂಜಾಬ್ ನಲ್ಲೂ ಭಾರೀ ಮಳೆಯಾಗುತ್ತಿದ್ದು, ರಾಜ್ಯದ ಪ್ರಮುಖ ನಗರಗಳಲ್ಲಿ ನೀರು ತುಂಬಿದ್ದು, ಅಲ್ಲಿನ ನಿವಾಸಿಗಳನ್ನು ದೋಣಿಗಳಲ್ಲಿ ರಕ್ಷಿಸಲಾಗಿದೆ.
ನಗರ ಪ್ರದೇಶಗಳಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಸಾವಿರಾರು ಎಕರೆ ಕೃಷಿ ಭೂಮಿ ಜಲಾವೃತವಾಗಿದೆ.
ಪಟಿಯಾಲ, ರೋಚಾರ್ ಮತ್ತು ಮೊಹಾಲಿ ತಗ್ಗು ಪ್ರದೇಶಗಳಿಂದ ಸ್ಥಳಾಂತರಿಸಲು ಕೇಂದ್ರ ಮತ್ತು ರಾಜ್ಯ ರಕ್ಷಣಾ ತಂಡಗಳು ಮತ್ತು ಭಾರತೀಯ ಸೇನೆಯ ಪಡೆಗಳನ್ನು ಕರೆತರಲಾಗಿದೆ. ಸಟ್ಲೆಜ್, ಬಿಯಾಸ್ ಘಗ್ಗರ್ ನದಿಗಳಲ್ಲಿ ಅಪಾಯದ ಮಟ್ಟಕ್ಕಿಂತ ಹೆಚ್ಚು ನೀರು ಹರಿದಿದೆ.