ಅಕ್ಕಿ ಬದಲು ಹಣ: ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯ ಸರಕಾರದ ಗ್ಯಾರಂಟಿಗಳಲ್ಲಿ ಒಂದಾದ ಉಚಿತ ಅಕ್ಕಿ ಯೋಜನೆಯ ಭಾಗವಾದ ಅಕ್ಕಿ ಬದಲು ಹಣ ನೀಡೋ ಕಾರ್ಯಕ್ರಮಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ಇಂದು ಮೈಸೂರು ಮತ್ತು ಕೋಲಾರ ಜಿಲ್ಲೆಯ ಪಡಿತರದಾರರಿಗೆ ಹಣವರ್ಗಾವಣೆಯಾಗಲಿದೆ. ಮುಂದಿನ ದಿನಗಳಲ್ಲಿ ಹಂತ ಹಂತದಲ್ಲಿ ಬೇರೆ ಬೇರೆ ಜಿಲ್ಲೆಗಳ ಪಡಿತರದಾರರಿಗೆ ಹಣ ವರ್ಗಾವಣೆಯಾಗಲಿದೆ.

ಯೋಜನೆ ಜಾರಿಯಾದ ದಿನದಿಂದ 10 ದಿನಗಳೊಳಗೆ ಎಲ್ಲ ಪಡಿತರ ಚೀಟಿದಾರರ ಖಾತೆಗೆ ಹಣ ಪಾವತಿಯಾಗಲಿದೆ. ಪಡಿತರ ಕುಟುಂಬದ ಯಜಮಾನ ಅಥವಾ ಯಜಮಾನಿಯ ಖಾತೆಗೆ ಹಣ ಬಿಡುಗಡೆಯಾಗಲಿದೆ. ರಾಜ್ಯದಲ್ಲಿ 10,89,899 ಅಂತ್ಯೋದಯ ಕಾರ್ಡುಗಳಿದ್ದು ಒಟ್ಟು 44,84,178 ಮಂದಿ ಫಲಾನುಭವಿಗಳು ಹಾಗೂ 1,17,41,561 ಬಿಪಿಎಲ್‌ ಕಾರ್ಡುಗಳಿದ್ದು, 3,97,64,489 ಮಂದಿ ಫಲಾನುಭವಿಗಳಿದ್ದಾರೆ. ಒಟ್ಟು 4.42 ಕೋಟಿಗೂ ಅಧಿಕ ಫಲಾನುಭವಿಗಳು ಹಣ ಪಡೆದುಕೊಳ್ಳಲಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ. ಡಿಸಿಎಂ ಡಿ.ಕೆ ಶಿವಕುಮಾರ್‌ ಆಹಾರ ಸಚಿವ ಕೆ.ಹೆಚ್‌ ಮುನಿಯಪ್ಪ ಅವರು ಹಾಜರಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!