ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರಿನಿಂದ ದುಬೈಗೆ ಹೋಗಬೇಕಿದ್ದ ಏರ್ ಇಂಡಿಯಾ ವಿಮಾನ ವಿಳಂಬವಾಗಿದ್ದು, ನಿನ್ನೆ ರಾತ್ರಿಯಿಂದ ಏರ್ ಪೋರ್ಟ್ ನಲ್ಲೇ ಪ್ರಯಾಣಿಕರು ಪರದಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರು ವಿಮಾನ ನಿಲ್ದಾಣದಿಂದ ನಿನ್ನೆ ರಾತ್ರಿ 11 ಗಂಟೆಗೆ ಏರ್ ಇಂಡಿಯಾ ವಿಮಾನ ದುಬೈಗೆ ತೆರಳಬೇಕಿತ್ತು. ಆದರೆ ವಿಮಾನದ ಎಂಜಿನ್ ನಲ್ಲಿ ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ವಿಮಾನ ವಿಳಂಬವಾಗಿದೆ. ರಾತ್ರಿಯೆಲ್ಲ ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿಯೇ ತಂಗಿದ್ದು, ಈವರೆಗೂ ಬದಲಿ ವಿಮಾನ ವ್ಯವಸ್ಥೆಯನ್ನೂ ಮಾಡದ ಏರ್ ಪೋರ್ಟ್ ಅಧಿಕಾರಿಗಳ ವಿರುದ್ಧ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ.