ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಹಳೆ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಮಾಡುವುದಕ್ಕಾಗಿ ಹುಟ್ಟಿಕೊಂಡ ಲೋಕ ಅದಾಲತ್,
ಈಗ ಒಂದು ಹೊಸ ದಾಖಲೆಯನ್ನೇ ಮಾಡಿದೆ.
ಶನಿವಾರ (ಜುಲೈ 8) ನಡೆದ ಈ ಅದಾಲತ್ನಲ್ಲಿ ಒಂದೇ ದಿನ 34 ಲಕ್ಷ ಪ್ರಕರಣಗಳನ್ನು ಇತ್ಯರ್ಥಗೊಳಿಸಿದೆ.
ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಕಾರ್ಯಕಾರಿ ಅಧ್ಯಕ್ಷರಾದ ನ್ಯಾಯಮೂರ್ತಿ ಜಿ ನರೇಂದರ್ (Justice G Narendar) ಅವರು ಮಾಧ್ಯಮ ಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.
ಜುಲೈ 8ರಂದು ರಾಜ್ಯದಲ್ಲಿ 1,020 ಪೀಠಗಳು ಕಾರ್ಯ ನಿರ್ವಹಿಸಿದ್ದು, ಒಟ್ಟು 34,76,231 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಈ ಪೈಕಿ 2,50,344 ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, 32,25,887 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಇದರಿಂದ 1,911 ಕೋಟಿ ರೂ.ಗಳನ್ನು ಪರಿಹಾರದ ರೂಪದಲ್ಲಿ ವಿಲೇವಾರಿ ಮಾಡಲಾಗಿದೆ ಎಂದು ತಿಳಿಸಿದರು.