ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದಲ್ಲಿ ಮತ ಎಣಿಕೆ ಕೇಂದ್ರದ ಹೊರಗೆ ಬಾಂಬ್ ಸ್ಫೋಟಗೊಂಡಿದೆ.
ಡೈಮಂಡ್ ಹಾರ್ಬರ್ ಪಟ್ಟಣದಲ್ಲಿ ಪಂಚಾಯತ್ ಚುನಾವಣಾ ಮತ ಎಣಿಕೆ ಕೇಂದ್ರದ ಬಳಿ ಬಾಂಬ್ ಸ್ಫೋಟ ಸಂಭವಿಸಿದ್ದು, ಜನರು ತುಂಬಿದ್ದ ಸಮಯದಲ್ಲೇ ಸ್ಫೋಟವಾಗಿದೆ.
ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ನಡೆಯುತ್ತಿರುವ ವೇಳೆ ದುಷ್ಕರ್ಮಿಗಳು ಬಾಂಬ್ ಎಸೆದಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.