ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರವು ಪಿಯು ತರಗತಿಗಳಿಗೆ ಹೊಸ ಅಂಕ ಮಾದರಿಯನ್ನು ಜಾರಿಗೆ ತಂದಿದೆ. ಮೌಲ್ಯಮಾಪನ ವ್ಯವಸ್ಥೆಯಲ್ಲಿ ಬದಲಾವಣೆಯನ್ನು ಮಾಡಲಾಗಿದ್ದು, ಪ್ರಾಯೋಗಿಕ ಪರೀಕ್ಷೆಗಳನ್ನು ಹೊಂದಿರದ ವಿಷಯಗಳಿಗೆ ಆಂತರಿಕ ಮೌಲ್ಯಮಾಪನ ಪರೀಕ್ಷೆ ನಡೆಸಲು ಸರ್ಕಾರ ಅನಮತಿ ನೀಡಿದೆ.
ಪಿಯುಸಿಯಲ್ಲಿ ಪ್ರಾಯೋಗಿಕ ಪರೀಕ್ಷೆ ಹೊಂದಿರದ ಭಾಷಾ ವಿಷಯಗಳು ಹಾಗೂ ಕಲಾ, ವಾಣಿಜ್ಯ ವಿಭಾಗದ ಕೋರ್ ವಿಷಯಗಳ ಪರೀಕ್ಷೆಗೆ 2023-24ನೇ ಸಾಲಿನಿಂದ 20 ಅಂಕಗಳಿಗೆ ಆಂತರಿಕ ಮೌಲ್ಯಮಾಪನ ಪರೀಕ್ಷೆ ನಡೆಸಲು ಸರ್ಕಾರ ಸಮ್ಮತಿಸಿದೆ. ಆಂತರಿಕ ಮೌಲ್ಯಮಾಪನ ನಡೆಸಲು ಪಿಯು ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಸರ್ಕಾರ ಒಪ್ಪಿಗೆ ನೀಡಿದ್ದು ಪ್ರಸಕ್ತ ಸಾಲಿನಿಂದಲೇ ಜಾರಿಯಾಗಲಿದೆ.
ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಪ್ರಸ್ತುತ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ, ಕರ್ನಾಟಕ ಸಂಗೀತ ಮತ್ತು ಹಿಂದೂಸ್ತಾನಿ ಸಂಗೀತ ಸೇರಿದಂತೆ ಇನ್ನು ಹಲವು ವಿಷಯಗಳಿಗೆ 70 ಅಂಕಗಳಿಗೆ ಲಿಖಿತ ಪರೀಕ್ಷೆ ಮತ್ತು ಉಳಿದ 30 ಅಂಕಗಳಿಗೆ ಪ್ರಾಯೋಗಿಕ ಪರೀಕ್ಷೆ ನಡೆಸಲಾಗುತ್ತಿದೆ. ಇದು ಹಾಗೇಯೆ ಮುಂದುವರೆಯಲಿದೆ.