ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್‌ವುಡ್ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ 61ನೇ ವಸಂತಕ್ಕೆ ಕಾಲಿಟ್ಟಿದ್ದು, ನಾಲ್ಕು ವರ್ಷದ ನಂತರ ಇದೀಗ ಮತ್ತೆ ಫ್ಯಾನ್ಸ್ ಜೊತೆ ತಮ್ಮ ಬರ್ಥ್‌ಡೇ ಸೆಲೆಬ್ರೇಟ್ ಮಾಡಿಕೊಂಡಿದ್ದಾರೆ.
ಮಧ್ಯರಾತ್ರಿಯೇ ಅಭಿಮಾನಿಗಳು ಕೇಕ್ ಜೊತೆ ಶಿವಣ್ಣ ಮನೆ ಮುಂದೆ ಜಮಾಯಿಸಿದ್ದು, ಮನೆಯ ಸುತ್ತಮುತ್ತ ರಸ್ತೆಗಳಲ್ಲಿ ಬ್ಯಾನರ್ ಕಂಗೊಳಿಸುತ್ತಿದೆ. ರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕತ್ತರಿಸಿ ಶಿವಣ್ಣ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಇಂದು ಕೂಡ ಅಭಿಮಾನಿಗಳನ್ನು ಭೇಟಿ ಮಾಡಲಿದ್ದಾರೆ.
ಶಿವಣ್ಣ ಇಂದು ಕಂಠೀರವ ಸ್ಟುಡಿಯೋದಲ್ಲಿರುವ ಡಾ.ರಾಜ್ ಸಮಾಧಿಗೆ ಭೇಟಿ ನೀಡಲಿದ್ದಾರೆ. ತದನಂತರ ಅಭಿಮಾನಿಗಳನ್ನು ಭೇಟಿ ಮಾಡಲಿದ್ದಾರೆ.