ಹೊಸದಿಗಂತ ಡಿಜಿಟಲ್ ಡೆಸ್ಕ್:
ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಾಲ್ ಅವರ ಪತ್ನಿ ಸೀತಾ ದಹಾಲ್ ಇಂದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಅಸ್ವಸ್ಥರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸೀತಾ ದಹಲ್ ಅವರ ಪತಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ.