ಹೊಸದಿಗಂತ ಡಿಜಿಟಲ್ ಡೆಸ್ಕ್:
ನನ್ನ ಮತ್ತು ಸಿದ್ದರಾಮಯ್ಯ ಮಧ್ಯೆ ಒಪ್ಪಂದ ನಡೆದಿದೆ. ನಾವಿಬ್ಬರೂ ಮಾತನಾಡಿಕೊಂಡಿದ್ದೇವೆ, ಅದರಂತೆ ನಡೆದುಕೊಳ್ಳುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ನಾನು ಯಾವತ್ತೂ ಐದು ವರ್ಷ ಇರುವುದಿಲ್ಲ ಎಂದು ಹೇಳಿಲ್ಲ. ಹೈಕಮಾಂಡ್ ನಿರ್ಧಾರ ಆಗಿದೆ. ಹೈಕಮಾಂಡ್ ಸಿಎಂ ಪರವಾಗಿ ಇದ್ದದ್ದಕ್ಕೆ ಅವರು ಸಿಎಂ ಆಗಿದ್ದಾರೆ ಎಂದರು.
ರಾಜ್ಯದಲ್ಲಿ ಸಿಎಂ ಬದಲಾವಣೆ ಸಂಬಂಧ ಚರ್ಚೆ ನಡೆಯುತ್ತಿದೆ ಎಂಬ ಪ್ರಶ್ನೆಗೆ, ಅದು ಎಲ್ಲವೂ ನಿಮ್ಮಲ್ಲಿ ಚರ್ಚೆ ಆಗುತ್ತಿದೆ ಎಂದು ಮುಗುಳುನಕ್ಕು ಡಿಸಿಎಂ ತೆರಳಿದರು.
ಅಧಿವೇಶನದ ಕಡೇ ದಿನ ಸಿಎಂ ಸಿದ್ದರಾಮಯ್ಯ, ಎರಡೂವರೆ ವರ್ಷ ಸಿಎಂ ಎಂದು ತೀರ್ಮಾನ ಆಗಿಲ್ಲ. ಈಗ ನಾನೇ ಮುಖ್ಯಮಂತ್ರಿ, ಮುಂದೆಯೂ ನಾನೇ ಇರುತ್ತೇನೆ. ಈಗ ನಾನು ಸಿಎಂ ಆಗಿದ್ದೇನೆ, ನನ್ನ ಪ್ರಕಾರ ಹೈಕಮಾಂಡ್ ನನ್ನ ಪರವೇ ಇದೆ. ಈಗಲೂ ನಾನೇ ಮುಖ್ಯಮಂತ್ರಿ, ಹೈಕಮಾಂಡ್ ಹೇಳೋವರೆಗೂ ನಾನೇ ಮುಖ್ಯಮಂತ್ರಿ ಎಂದು ಹೇಳುವ ಮೂಲಕ ಫುಲ್ ಟರ್ಮ್ ಸಿಎಂ ನಾನು ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಬ್ರಹ್ಮಾಸ್ತ್ರ ಪ್ರಯೋಗಿಸಿದ್ದರು.

