ಶಿವಮೊಗ್ಗದ ಪಶು ವೈದ್ಯಕೀಯ ಕಾಲೇಜಿನಲ್ಲಿ ಉದ್ಯೋಗಾವಕಾಶ: ಜು.13ಕ್ಕೆ ನೇರ ಸಂದರ್ಶನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಶಿವಮೊಗ್ಗದ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ.

ಕರ್ನಾಟಕ ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಪಶು ವೈದ್ಯಕೀಯ ಶರೀರಕ್ರಿಯಾ ಮತ್ತು ಜೀವರಸಾಯನ ಶಾಸ್ತ್ರ ವಿಭಾಗ, ಜಾನುವಾರು ಉತ್ಪಾದನಾ ನಿರ್ವಹಣೆ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಸಾರ್ವಜನಿಕ ಆರೋಗ್ಯ ಮತ್ತು ಸಮುದಾಯ ರೋಗ ಅಧ್ಯಯನ ಶಾಸ್ತ್ರ ವಿಭಾಗ, ಪಶು ವೈದ್ಯಕೀಯ ಸ್ತ್ರೀ ರೋಗ ಮತ್ತು ಪ್ರಸೂತಿ ಶಾಸ್ತ್ರ ವಿಭಾಗ, ಪಶು ವೈದ್ಯಕೀಯ ಶಸ್ತ್ರ ಚಿಕಿತ್ಸೆ ಮತ್ತು ಕ್ಷಕಿರಣ ಶಾಸ್ತ್ರ ವಿಭಾಗ, ಪಶು ವೈದ್ಯಕೀಯ ಪರೋಪಜೀವಿ ಶಾಸ್ತ್ರ ವಿಭಾಗ, ಜಾನುವಾರು ಸಾಕಣಿಕೆ ಸಂಕೀರ್ಣ ವಿಭಾಗ, ಪಶು ವೈದ್ಯಕೀಯ ರೋಗ ಮತ್ತು ಪ್ರಸೂತಿ ಶಾಸ್ತ್ರ, ಪಶು ವೈದ್ಯಕೀಯ ಶಸ್ತ್ರ ಚಿಕಿತ್ಸೆ ಮತ್ತು ಕ್ಷಕಿರಣ ಶಾಸ್ತ್ರ, ಪಶುವೈದ್ಯಕೀಯ ಚಿಕಿತ್ಸಾ ವಿಭಾಗ, ಚಿಕಿತ್ಸಾ ರೋಗಶಾಸ್ತ್ರದಲ್ಲಿ 12 ಹುದ್ದೆಗಳು ಖಾಲಿ ಇವೆ.

ಬಿಎಸ್ಸಿ ಪದವಿ, ಪಿಎಚ್​ಡಿ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಜುಲೈ 13 ರಂದು ಬೆಳಗ್ಗೆ 11ಗಂಟೆಗೆ ಪಶು ವೈದ್ಯಕೀಯ ಕಾಲೇಜು​, ವಿನೋಬಾ ನಗರ್​, ಅಂಚೆ ಸಂಖ್ಯೆ ನಂ. 53, ಶಿವಮೊಗ್ಗ- 577204 ರಲ್ಲಿ ನೇರ ಸಂದರ್ಶನ ನಡೆಯುತ್ತದೆ. ಆಸಕ್ತರು ಪಾಲ್ಗೊಳ್ಳಬಹುದು.

ಅಧಿಕೃತ ಅಧಿಸೂಚನೆ ಸೇರಿದಂತೆ ಪ್ರಮುಖ ಮಾಹಿತಿಯನ್ನು kvafsu.edu.in ವೆಬ್‌ಸೈಟ್‌ ನಿಂದ ಪಡೆಯಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!