ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಡೇಟ್‌ ಫಿಕ್ಸ್: ಈ ಬಾರಿ ಥೀಮ್‌ ಏನು? ಇಲ್ಲಿದೆ ಮಾಹಿತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸ್ವಾತಂತ್ರ್ಯೋತ್ಸವದ ಅಂಗವಾಗಿ ಲಾಲ್‌ಬಾಗ್‌ ನಲ್ಲಿ ಫಲಪುಷ್ಟ ಪ್ರದರ್ಶನಕ್ಕೆ ದಿನಂಕ ನಿಗದಿಯಾಗಿದ್ದು, ಈ ಭಾರಿಯ ಥೀಮ್‌ ಕೂಡ ವಿಶೇಷವಾಗಿರಲಿದೆ.

ಆಗಸ್ಟ್ 4 ರಿಂದ 15ರ ವರೆಗೆ ಬೆಂಗಳೂರಿನ ಲಾಲ್​ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ. 76ನೇ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಈ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಇದು ಲಾಲ್​ಬಾಗ್​ನಲ್ಲಿ ನಡೆಯಲಿರುವ 214ನೇ ಫಲಪುಷ್ಪ ಪ್ರದರ್ಶನವಾಗಿರಲಿದೆ.

ಫಲಪುಷ್ಪ ಪ್ರದರ್ಶನಕ್ಕೆ ತೋಟಗಾರಿಕೆ ಇಲಾಖೆ ಈಗಾಗಲೆ ಸಿದ್ಧತೆ ಕೈಗೊಂಡಿದ್ದು, ಈ ಬಾರಿ ವಿಧಾನಸೌಧ ಹಾಗೂ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಥೀಮ್‌ ನೊಂದಿಗೆ ಫಲಪುಷ್ಪ ಪ್ರದರ್ಶನ ನಡೆಸಲಾಗುತ್ತಿದೆ. ಈ ಬಾರಿ ಫಲಪುಷ್ಪ ಪ್ರದರ್ಶನಕ್ಕೆ 2 ಕೋಟಿ ರೂಪಾಯಿ ಮೀಸಲಿಡಲಾಗಿದೆ.

ಲಾಲ್​ಬಾಗ್​ನಲ್ಲಿ ಪ್ರತಿ ವರ್ಷ ಗಣರಾಜ್ಯೋತ್ವವ ಹಾಗೂ ಸ್ವಾತಂತ್ರ್ಯೋತ್ಸವದ ಅಂಗವಾಗಿ ಫಲಪುಷ್ಟ ಪ್ರದರ್ಶನ ಏರ್ಪಡಿಸಲಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!