ಆಮ್ ಆದ್ಮಿ ಪಕ್ಷದಿಂದ ನಾಯಕತ್ವದ ಬದಲಾವಣೆ: ರಾಜ್ಯಾಧ್ಯಕ್ಷರಾಗಿ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ನೇಮಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಮ್ ಆದ್ಮಿ ಪಕ್ಷ ಮುಂದಿನ ಲೋಕಸಭೆ ಚುನಾವಣೆಗೆ ಸಜ್ಜಾಗುತ್ತಿದ್ದು, ಈ ಹಿನ್ನೆಲೆ ಮಹತ್ವದ ಬದಲಾವಣೆ ಮಾಡಲು ಹೊರಟಿದೆ. ಅದರಂತೆ ಕರ್ನಾಟಕದ ಆಮ್ ಆದ್ಮಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಹಿರಿಯ ನಟ ಹಾಗೂ ರಾಜಕಾರಣಿ ಮುಖ್ಯಮಂತ್ರಿ ಚಂದ್ರು ಅವರನ್ನು ನೇಮಕ ಮಾಡಲಾಗಿದೆ.

ಎಎಪಿ ಕರ್ನಾಟಕದ ರಾಜ್ಯಾಧ್ಯಕ್ಷರಾಗಿದ್ದ ಪೃಥ್ವಿ ರೆಡ್ಡಿ ಅವರನ್ನು ಎಎಪಿ ರಾಷ್ಟ್ರೀಯ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಎಎಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್ ದಿಲ್ಲಿಯಲ್ಲಿ ಬುಧವಾರ ರಾತ್ರಿ ಘೋಷಣೆ ಮಾಡಿದ್ದಾರೆ. ರಾಜ್ಯಾಧ್ಯಕ್ಷರ ಜೊತೆ ರಾಜ್ಯ ಸಂಘಟನಾ ಕಾರ್ಯದರ್ಶಿಗಳನ್ನಾಗಿ ಬಿಟಿ ನಾಗಣ್ಣ ಮತ್ತು ಅರ್ಜುನ್ ಹಲಗಿಗೌಡ ಅವರನ್ನು ನೇಮಕ ಮಾಡಲಾಗಿದೆ ಎಂದು ಪಕ್ಷ ಅಧಿಕೃತವಾಗಿ ತಿಳಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಪೃಥ್ವಿ ರೆಡ್ಡಿ, ಪಕ್ಷದ ನೂತನ ರಾಜ್ಯಾಧ್ಯಕ್ಷ ನೇಮಕವಾದ ಮುಖ್ಯಮಂತ್ರಿ ಚಂದ್ರು ಅವರಿಗೆ ಅಭಿನಂದನೆ ಸಲ್ಲಿಸಿದ್ದು, 2023 ರ ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಚಂದ್ರು ಆಮ್ ಆದ್ಮಿ ಪಕ್ಷವನ್ನು ಸೇರಿದ್ದರು. ಆದರೆ, ಯಾವುದೇ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸದೇ ಪಕ್ಷ ಸಂಘಟನೆಯಲ್ಲಿ ತೊಡಗಿದ್ದರು. ಇದೀಗ ಅವರನ್ನು ಎಎಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!