ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿದೆಡೆ ಕೊಳೆತ ಮೊಟ್ಟೆಪೂರೈಕೆಯಾಗುತ್ತಿದ್ದು, ಈ ಕುರಿತು ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ , ವಿತರಣೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಅಂಗನವಾಡಿ ಕೇಂದ್ರಗಳಿಗೆ ಮೊಟ್ಟೆ ಪೂರೈಕೆ ಮಾಡಿದವರನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳ ಲಾಗುತ್ತದೆ.ಇಂತಹವುದಕ್ಕೆಲ್ಲಾ ಕಡಿವಾಣ ಹಾಕುತ್ತೇವೆ. ಕೊಳೆತ ಮೊಟ್ಟೆ ವಿತರಣೆ ಮಾಡಿದವರ ವಿರುದ್ಧ ಕ್ರಮ ಕೈಗೊಂಡು ಅವರನ್ನು ಬ್ಲಾಕ್ ಲಿಸ್ಟ್ ಗೆ ಸೇರಿಸಲಾಗುತ್ತದೆ. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದರು.
ವಿವಿಧ ಜಿಲ್ಲೆಗಳಲ್ಲಿ ಅಂಗನವಾಡಿಗಳಿಗೆ ಪೂರೈಕೆ ಮಾಡಲಾಗುತ್ತಿರುವ ಮೊಟ್ಟೆಗಳ ಬಗ್ಗೆ ಆಕ್ಷೇಪ ವ್ಯಕ್ತವಾಗುತ್ತಿದ್ದು, ಕೊಳೆತ ಮೊಟ್ಟೆ ಪೂರೈಕೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆಯ ಬಳಿಕ ಇದೀಗ ಹಾವೇರಿ, ಕೊಡಗು ಜಿಲ್ಲೆಗಳ ಹಲವು ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆ ಮಾಡಲಾಗಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.