ಮಂಗಳೂರಿಗೆ ಆಗಮಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ದ.ಕ. ಬಿಜೆಪಿ ಪ್ರಕೋಷ್ಠದಿಂದ ಸ್ವಾಗತ

ಹೊಸದಿಗಂತ ಡಿಜಿಟಲ್ ಡೆಸ್ಕ್ : 

ಉಡುಪಿ ಜಿಲ್ಲೆಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಪರವಾಗಿ ಬಿಜೆಪಿ ಪ್ರಕೋಷ್ಠಗಳ ಸದಸ್ಯರು, ಕಾರ್ಯಕರ್ತರು ಹೂಗುಚ್ಛ ನೀಡಿ ಸ್ವಾಗತಿಸಿದರು.

ಈ ಸಂದರ್ಭ ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ಜಿಲ್ಲಾ ಆರ್ಥಿಕ ಪ್ರಕೋಷ್ಠದ ಸಂಚಾಲಕ ಸಿಎ ಶಾಂತಾರಾಮ ಶೆಟ್ಟಿ, ಸಹ ಸಂಚಾಲಕ ಸಿಎ ಎಸ್. ಎಸ್. ನಾಯಕ್, ದಕ್ಷಿಣ ಕನ್ನಡ ಬ ಜೆಪಿ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ದ.ಕ. ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ದ ಉಪಾಧ್ಯಕ್ಷ ಅಮಿತ್ ರಾಜ್, ವಿನ್ಯಾಸ್ ಶೆಟ್ಟಿ, , ಸಾಮಾಜಿಕ ಮಾಧ್ಯಮ ಪಕೋಷ್ಠದ ಸದಸ್ಯ ವಕೀಲ ಅಕ್ಷಯ್ ಆಳ್ವ, ಗೀತಾಂಜಲಿ ಸುವರ್ಣ, ವೀಣಾ ಶೆಟ್ಟಿ ಹಾಗೂ ಇತರ ಸದಸ್ಯರು ಉಪಸ್ಥಿತರಿದ್ದರು .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!