ಹೊಸದಿಗಂತ ಡಿಜಿಟಲ್ ಡೆಸ್ಕ್ :
ರಾಜ್ಯ ಸರಕಾರದ ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ‘ಶಕ್ತಿ ಯೋಜನೆ’ ಗೆ ರಾಜ್ಯದೆಲ್ಲೆಡೆ ಉತ್ತಮ ಸ್ಪಂದನೆ ಸಿಕ್ಕಿದ್ದು, ಮಹಿಳೆಯರು ಈ ಯೋಜನೆಯನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳುತ್ತಿದ್ದಾರೆ.
ಈ ಯೋಜನೆ ಕುರಿತು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಸರ್ಕಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿ, ಧರ್ಮಸ್ಥಳದ ಮಂಜುನಾಥ ಸ್ವಾಮಿ ದರುಶನಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ.
‘ಶಕ್ತಿ ಯೋಜನೆ’ ಯಿಂದ ಧರ್ಮಸ್ಥಳಕ್ಕೆ ಬರುವ ಮಹಿಳೆಯ ಪ್ರಮಾಣ ಹೆಚ್ಚಾಗಿದೆ. ಮಂಜುನಾಥ ಸ್ವಾಮಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರಿನಲ್ಲಿ ಕಾಣಿಕೆ ಹಾಕುತ್ತಿದ್ದಾರೆ.
ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ವೀರೇಂದ್ರ ಹೆಗ್ಗಡೆರಿಂದ ಸಿಎಂ ಸಿದ್ದರಾಮಯ್ಯಗೆ ಮೆಚ್ಚುಗೆ ಪತ್ರ ಬರೆದಿದ್ದಾರೆ. ಗ್ಯಾರಂಟಿ ಯೋಜನೆಗಳ ಮೂಲಕ ಉಪಯುಕ್ತ ಕಾರ್ಯಕ್ರಮಗಳನ್ನ ನೀಡುತ್ತಿದ್ದೀರಿ. ಧರ್ಮಸ್ಥಳಕ್ಕೆ ಬರುತ್ತಿರುವ ಮಹಿಳಾ ಭಕ್ತರು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಅನೇಕ ಮಹಿಳೆಯರು ನಿಮ್ಮ ಹೆಸರಿನಲ್ಲಿ ಶ್ರೀಮಂಜುನಾಥ್ ಸ್ವಾಮಿಗೆ ಸೇವೆ ಮತ್ತು ಕಾಣಿಕೆ ಸಲ್ಲಿಸುತ್ತಿದ್ದಾರೆ. ಬಜೆಟ್ ನಲ್ಲಿ ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿದ್ದಕ್ಕೆ ಅಭಿನಂದನೆಗಳು ಎಂದಿದ್ದಾರೆ.