ಪಾದಾರ್ಪಣೆ ಪಂದ್ಯದಲ್ಲೇ ಹಾಫ್ ಸೆಂಚುರಿ ಸಿಡಿಸಿದ ಯಶಸ್ವಿ ಜೈಸ್ವಾಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್ :

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಆಕರ್ಷಕ ಅರ್ಧಶತಕ ಪೂರೈಸಿದ್ದಾರೆ. ಈ ಮೂಲಕ ಮೊದಲ ಪಂದ್ಯದಲ್ಲೇ ಹಾಫ್ ಸೆಂಚುರಿಸಿದ ಸಾಧಕರ ಪಟ್ಟಿಗೆ ಸೇರ್ಪಡೆಯಾದರು.

ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಬ್ಯಾಟಿಂಗ್ ಆಯ್ದುಕೊಂಡು 150 ರನ್​ಗಳಿಗೆ ಆಲೌಟ್ ಆಯಿತು.

ಇದಾದ ಬಳಿಕ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಈ ಜೊತೆ ಶತಕದ ಜೊತೆಯಾಟವಾಡಿದರು. ಈ ಹಂತದಲ್ಲಿ ಅಲ್ಝಾರಿ ಜೋಸೆಫ್ ಎಸೆತವನ್ನು ಬೌಂಡರಿಗಟ್ಟುವ ಮೂಲಕ ಯಶಸ್ವಿ ಜೈಸ್ವಾಲ್ 104 ಎಸೆತಗಳಲ್ಲಿ ತಮ್ಮಚೊಚ್ಚಲ ಅರ್ಧಶತಕ ಪೂರೈಸಿದರು. ಈ ಮೂಲಕ ಪಾದಾರ್ಪಣೆ ಪಂದ್ಯದಲ್ಲೇ ಅರ್ಧಶತಕ ಬಾರಿಸಿದ ಭಾರತದ 13ನೇ ಆರಂಭಿಕ ಆಟಗಾರ ಎನಿಸಿಕೊಂಡರು. ಮತ್ತೊಂದೆಡೆ ಅನುಭವವನ್ನು ಧಾರೆಯೆರದ ರೋಹಿತ್ ಶರ್ಮಾ 106 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!