ಉತ್ತರ ಭಾರತದಲ್ಲಿ ಮುಂದುವರಿದ ಮಳೆ ಆರ್ಭಟ, ದೆಹಲಿಯಲ್ಲಿ ಪ್ರವಾಹ ಭೀತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಭಾರತದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ರಾಜಧಾನಿ ದೆಹಲಿಯಲ್ಲಿಯೂ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಹಾಮಳೆಗೆ ಯಮುನಾ ನದಿ ಅಪಾಯ ಮಟ್ಟ ಮೀರಿ ಸುರಿಯುತ್ತಿದ್ದು, ತಗ್ಗು ಪ್ರದೇಶಗಳಿಗೆ ಈಗಾಗಲೇ ನೀರು ನುಗ್ಗಿದೆ.

Delhi sees a new record amid heavy rain over last 24 hours | Latest News  Delhi - Hindustan Timesದೆಹಲಿಯ ಎಲ್ಲಾ ಮುನ್ಸಿಪಲ್ ಕಾರ್ಪೋರೇಷನ್ ಶಾಲೆಗಳಿಗೆ ಜುಲೈ 16ರವರೆಗೆ ರಜೆ ಘೋಷಿಸಲಾಗಿದೆ. ರಸ್ತೆಗಳು ನದಿಗಳಾಗಿ ಮಾರ್ಪಟ್ಟಿದ್ದು, ಟ್ರಾಫಿಕ್ ಜಾಂ ಸಮಸ್ಯೆ ಉಂಟಾಗಿದೆ. ಹೆದ್ದಾರಿಯಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ಜನ ಹೈರಾಣಾಗಿದ್ದಾರೆ.

Yamuna water level: 'Not good news for Delhi', says CM Arvind Kejriwal;  urges Centre to intervene | Mint #AskBetterQuestionsಯಮುನಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿದ್ದಂತೆಯೇ ದೆಹಲಿಯ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೂ ಜು.16ರವರೆಗೆ ರಜೆ ಘೋಷಿಸಲಾಗಿದೆ. ಐತಿಹಾಸಿಕ ಕೆಂಪು ಕೋಟೆಗೂ ನೀರು ನುಗ್ಗಿದ್ದು, ಇಂದು ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ. ಮುಂದಿನ ೨೪ ಗಂಟೆಯಲ್ಲಿ ಯಮುನೆಯ ನೀರಿನ ,ಮಟ್ಟ ಕಡಿಮೆಯಾಗುವ ಸಾಧ್ಯತೆ ಇದೆ. ಹಿಮಾಚಲದಲ್ಲಿಯೂ ಮಳೆ ಸುರಿಯುತ್ತಿದ್ದು, ಮನಾಲಿಯಲ್ಲಿ ಕಟ್ಟಡಗಳು ಕುಸಿದಿವೆ.

Highest single-day rainfall for August since 2007 in Delhi | Delhi News

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!