ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು 2023ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2023)ಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ www.schooleducation.kar.nic.in ಗೆ ಭೇಟಿ ನೀಡಿ ಇಂದಿನಿಂದ ಅರ್ಜಿ ಸಲ್ಲಿಸಬಹುದು.
ಶಿಕ್ಷಕರ ಅರ್ಹತಾ ಪರೀಕ್ಷೆಗೆ ನಿಗದಿತ ಶುಲ್ಕದೊಂದಿಗೆ ಆನ್‌ಲೈನ್ ಮೂಲಕ ದಿನಾಂಕ ಜುಲೈ 14,2023 ರಿಂದ ಆಗಸ್ಟ್ 5,2023ರೊಳಗೆ ಅರ್ಜಿ ಸಲ್ಲಿಸಬಹುದು.
ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ವೆಬ್‌ಸೈಟ್‌ನಲ್ಲಿ ನೀಡಲಾದ ಸೂಚನೆಗಳನ್ನು ಡೌನ್ ಲೋಡ್ ಮಾಡಿಕೊಂಡು, ಕೂಲಂಕಷವಾಗಿ ಓದಿ ಅರ್ಥೈಸಿಕೊಂಡು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹೆಚ್ಚಿನ ವಿವರಗಳಿಗಾಗಿ ಇಲಾಖೆಯ ವೆಬ್‌ಸೈಟ್ www.schooleducation.kar.nic.in ಭೇಟಿ ನೀಡಿ.