ಬೆಂಗಳೂರಿನಲ್ಲಿ ಹೊಟೇಲ್ ಗ್ರಾಹಕರಿಗೂ ತಟ್ಟಲಿದೆ ಬೆಲೆ ಏರಿಕೆ ಬಿಸಿ: ಶೇ 10 – 15ರಷ್ಟು ದರ ಹೆಚ್ಚಳಕ್ಕೆ ಚಿಂತನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಅಗತ್ಯ ವಸ್ತುಗಳ ಬೆಲೆ ಏರಿಕೆಯ ಕಾರಣ ಬೆಂಗಳೂರಿನ ಹೋಟೆಲ್ ಮಾಲೀಕರ ಸಂಘವು ತಮ್ಮ ವ್ಯಾಪ್ತಿಯಲ್ಲಿರುವ ರೆಸ್ಟೊರೆಂಟ್‌ಗಳು ಮತ್ತು ಫಾಸ್ಟ್ ಫುಡ್ ಮಳಿಗೆಗಳಲ್ಲಿ ಆಹಾರದ ಬೆಲೆಯನ್ನು ಶೇ.10 ರಿಂದ 15 ರಷ್ಟು ಹೆಚ್ಚಿಸಲು ಚಿಂತನೆ ನಡೆಸಿದೆ. ಹೊಟೇಲ್ ಮಾಲೀಕರ ಸಂಘವು ಜು.25 ರಂದು ಕರೆದಿರುವ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ವಿದ್ಯುಚ್ಛಕ್ತಿ, ಸರಕುಗಳು ಮತ್ತು ಹಲವಾರು ಪದಾರ್ಥಗಳ ಹೆಚ್ಚಳದಿಂದ ಬೆಲೆ ಹೆಚ್ಚಳ ಅನಿವಾರ್ಯವಾಗಿದೆ ಎಂದು ಹೋಟೆಲ್ ಮಾಲೀಕರ ಸಂಘ ಹೇಳಿದೆ.

ವಿದ್ಯುತ್ ಬಿಲ್‌ ಹೆಚ್ಚಾಗಿದೆ, ಸರಕುಗಳ ಬೆಲೆ ಹೆಚ್ಚಾಗಿದೆ ಮತ್ತು ತರಕಾರಿಗಳು ದುಬಾರಿಯಾಗುತ್ತಿವೆ. ಮಾರುಕಟ್ಟೆಯಲ್ಲಿ ಅಸ್ತಿತ್ವ ಉಳಿಸಿಕೊಳ್ಳಲು ಹೊಟೇಲ್ ಗಳಲ್ಲಿ ನೀಡುವ ಆಹಾರದ ಬೆಲೆ ಕನಿಷ್ಠ ಶೇ 10ರಷ್ಟು ಹೆಚ್ಚಳ ಅನಿವಾರ್ಯ ಎಂದು ಹೋಟೆಲ್ ಮಾಲೀಕರು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಚರ್ಚೆ ನಡೆಸುತ್ತಿದ್ದೇವೆ ಮತ್ತು ಶೀಘ್ರ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ. ಈಗಾಗಲೇ ಕೆಲವು ಹೊಟೇಲ್ ಮಾಲೀಕರು ಬೆಲೆ ಏರಿಕೆ ಮಾಡಿದ್ದು, ಇನ್ನು ಕೆಲವರು ಆಷಾಢ ಮುಗಿಯಲು ಕಾಯುತ್ತಿದ್ದಾರೆ ಎಂದು ಬೆಂಗಳೂರು ಹೊಟೇಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!