ಗೃಹಲಕ್ಷ್ಮಿ ಯೋಜನೆಗೆ ಹೊಸ app; ನಾಲ್ಕೈದು ದಿನದಲ್ಲಿ ಯೋಜನೆಗೆ ಅರ್ಜಿ ಸ್ವೀಕಾರ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಗೃಹಲಕ್ಷ್ಮಿ ಯೋಜನೆಗೆ ಹೊಸ app ಸಿದ್ದಪಡಿಸಲಾಗಿದ್ದು, ಮುಂದಿನ ನಾಲ್ಕೈದು ದಿನಗಳಲ್ಲಿ app ಬಿಡುಗಡೆ ಮಾಡಿ ಅರ್ಜಿ ಸ್ವೀಕಾರ ಕಾರ್ಯ ಆರಂಭಿಸಲಾಗುವುದು , ಆಗಸ್ಟ್ 16ರಿಂದ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.

ವಿಧಾನಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯೆ ಹೇಮಲತಾ ನಾಯಕ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಾವು ಗೃಹಲಕ್ಷ್ಮಿ ಯೋಜನೆಯಡಿ ಅರ್ಜಿಯನ್ನು ಇನ್ನೂ ಕರೆದಿಲ್ಲ. ಅರ್ಜಿಯನ್ನೇ ಕರೆದಿಲ್ಲ ಎಂದ ಮೇಲೆ ಸರ್ವರ್ ಡೌನ್ ಪ್ರಶ್ನೆಯೇ ಬರುವುದಿಲ್ಲ. ಸರ್ವರ್ ಡೌನ್ ಆರೋಪ ನಿರಾಧಾರವಾದುದು ಎಂದು ಹೇಳಿದರು.

ಯೋಜನೆಗಾಗಿ ಹೊಸದಾಗಿ app ಸಿದ್ದಪಡಿಸಿದ್ದು, ಅದು ಇನ್ನೂ ಪ್ರಾಯೋಗಿಕ ಪರೀಕ್ಷೆಯಲ್ಲಿದೆ. ಆಯಪ್ ಇನ್ನೂ ರಿಲೀಸ್ ಆಗಿಲ್ಲ. ನಾಲ್ಕೈದು ದಿನದಲ್ಲಿ ಆಯಪ್ ಬಿಡುಗಡೆ ಮಾಡಿ ನಂತರ ಅರ್ಜಿ ಕರೆಯುವ ದಿನಾಂಕವನ್ನು ಪ್ರಕಟಿಸಲಾಗುತ್ತದೆ. ಪರೀಕ್ಷಾರ್ಥ ಪ್ರಯೋಗದ ನಂತರ ಅರ್ಜಿ ಅಪ್​ಲೋಡ್ ಮಾಡುವ ಕೆಲಸಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಪಂಚ ಗ್ಯಾರಂಟಿಗಳ ಮಾಹಿತಿಗಾಗಿ ಸಹಾಯವಾಣಿ ಆರಂಭಿಸಿದ್ದೇವೆ. ನಮ್ಮ ಭಾಗ್ಯಲಕ್ಷ್ಮಿ ಯೋಜನೆ ಬಗ್ಗೆ ಜನರು ಹೆಚ್ಚಿನ ಉತ್ಸಾಹ ತೋರಿದ್ದಾರೆ. ಗೃಹಲಕ್ಷ್ಮಿ ಯೋಜನೆ ಬಗ್ಗೆ ತಿಳಿದುಕೊಳ್ಳುತ್ತಿದ್ದಾರೆ. ಪ್ರಾಯೋಗಿಕವಾಗಿ ಸಹಾಯವಾಣಿ ಆರಂಭಿಸಿದ್ದೇವೆ. ಈ ಹಿಂದಿನ ಭಾಗ್ಯಜ್ಯೋತಿ ಯೋಜನೆಯಲ್ಲಿನ ನ್ಯೂನತೆ ಸರಿಪಡಿಸಿ, ಗೃಹಲಕ್ಷ್ಮಿ ಯೋಜನೆ ತರಲಿದ್ದೇವೆ. ಯಾರಿಗೂ ಕಷ್ಟವಾಗಬಾರದು ಎಂದು ಈ ಆಯಪ್ ತಯಾರಿಸುತ್ತೇವೆ. ಪರೀಕ್ಷಾರ್ಥ ಪ್ರಯೋಗ ನಡೆಸುತ್ತಿದ್ದೇವೆ, ನಾಲ್ಕೈದು ದಿನದಲ್ಲಿ ಅಪ್​ಲೋಡ್ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಿದ್ದೇವೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!