ಜು.19 ರಿಂದ ಗೃಹಲಕ್ಷ್ಮಿ ಯೋಜನೆ ಶುರು: ಸಿಎಂ ಸಿದ್ದರಾಮಯ್ಯ ನೀಡ್ತಾರೆ ಚಾಲನೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯ ಸರಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ರಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ .

ಸಂಜೆ 5 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸಿಎಂ ಸಿದ್ದರಾಮಯ್ಯ ಗೃಹಲಕ್ಷ್ಮಿ ಯೋಜನೆಗೆ ಅಧಿಕೃತ ಚಾಲನೆ ನೀಡಲಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ‘ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪಕ್ರಿಯೆಯನ್ನು ಜುಲೈ 19 ರಿಂದ ಆರಂಭವಾಗಲಿದೆ ಎಂದುಹೇಳಿದ್ದಾರೆ.

ಆಗಸ್ಟ್ ತಿಂಗಳಿಂದ ಮನೆ ಯಜಮಾನಿ ಖಾತೆಗೆ 2 ಸಾವಿರ ರೂ. ಹಾಕುತ್ತೇವೆ . ಅರ್ಜಿ ಸ್ವೀಕಾರ ಜುಲೈ 19 ರಿಂದ ಆರಂಭವಾಗಲಿದ್ದು, ಆಗಸ್ಟ್ 15ಕ್ಕೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮೆ ಆಗಲಿದೆ. ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ಗಳಲ್ಲಿ ಯಜಮಾನಿ ಎಂದು ಗುರುತಿಸಿಕೊಂಡ ಮಹಿಳೆಯರಿಗೆ ಈ ಯೋಜನೆಯ ಲಾಭ ಸಿಗಲಿದೆ’ ಎಂದರು.

ರೇಷನ್ ಕಾರ್ಡ್ನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ದಿನಾಂಕ, ಸಮಯ ಮತ್ತು ನೋಂದಣಿ ಸ್ಥಳದ ವಿವರ ಎಸ್‌ಎಂಎಸ್ ಮೂಲಕ ರವಾನೆ ಮಾಡಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ವನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರದಲ್ಲಿ ನೋಂದಣಿಗೆ ಅವಕಾಶ ಮಾಡಲಾಗುವುದು ಎಂದರು.

ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವ ಮಹಿಳೆ ಯೋಜನೆಯ ಫಲಾನುಭವಿಯಾಗಿರುತ್ತಾರೆ. ಫಲಾನುಭವಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿಎಸ್ಟಿ ಪಾವತಿದಾರರಾಗಿರತಕ್ಕದ್ದಲ್ಲ ಎಂದರು.

ಗೃಹಲಕ್ಷ್ಮಿ ಯೋಜನೆ ಜಾರಿಗಾಗಿ ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಿಕೊಳ್ಳಲುಸರ್ಕಾರ ನಿರ್ಧರಿಸಿದ್ದು, ಮಾರ್ಗಸೂಚಿ ಪ್ರಕಟಿಸಿದೆ.

ಪ್ರಜಾಪ್ರತಿನಿಧಿಗಳನ್ನು ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಪ್ರತಿ ಒಂದು ಸಾವಿರ ಜನಸಂಖ್ಯೆ ಅಥವಾ ಗ್ರಾಮಕ್ಕೆ ಇಬ್ಬರು ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಓರ್ವ ಮಹಿಳಾ ಪ್ರಜಾಪ್ರತಿನಿಧಿ ಸೇರಿ ಇಬ್ಬರು ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ಒಂದು ತಿಂಗಳ ಅವಧಿಗೆ ಮಾತ್ರ ಪ್ರಜಾಪ್ರತಿನಿಧಿಗಳ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!