ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳು ಶರಣಾಗುವಂತೆ ರಾಷ್ಟ್ರೀಯ ತನಿಖಾ ದಳ ಮತ್ತೊಮ್ಮೆ ಎಚ್ಚರಿಕೆಯ ಸಂದೇಶವನ್ನು ಹೊರಡಿಸಿದೆ.
ಸುಳ್ಯದಲ್ಲಿ ಮತ್ತೊಮ್ಮೆ ಎನ್ ಐಎ ಧ್ವನಿ ವರ್ಧಕದ ಮೂಲಕ ಎಚ್ಚರಿಕೆ ನೀಡಿದ್ದು, ಆಗಸ್ಟ್ 18ರೊಳಗೆ ಶರಣಾಗಲೇಬೇಕೆಂದು ಸೂಚಿಸಿದೆ.
ಈ ಹಿಂದೆ ಜೂ.30ರೊಳಗೆ ಶರಣಾಗಬೇಕು ಎಂದು ಸೂಚನೆ ನೀಡಲಾಗಿತ್ತು ಶರಣಾಗದೇ ಇದ್ದಲ್ಲಿ ಅವರ ಮನೆಯನ್ನು ಜಪ್ತಿ ಮಾಡುವುದಾಗಿ ಘೋಷಿಸಲಾಗಿತ್ತು. ಆದರೆ ಇದುವರೆಗೆ ಪ್ರವೀಣ್ ನೆಟ್ಟಾರು ಹಂತಕರು ಶರಣಾಗಿರಲಿಲ್ಲ. ಇದಕ್ಕೆ ಸಂಬಂಧಿಸಿದಂತೆ ಎರಡು ವಾರಗಳ ಹಿಂದೆ ಎನ್‌ಐಎ ಅಧಿಕಾರಿಗಳು ಸುಳ್ಯ ನಗರದಲ್ಲಿ ಸಾರ್ವಜನಿಕವಾಗಿ ಧ್ವನಿವರ್ಧಕದ ಮೂಲಕ ಅನೌನ್ಸ್ ಮಾಡಿದ್ದು, ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನವನ್ನು ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.