ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಸ್ರೇಲ್ (Israel) ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಶನಿವಾರ ಆಸ್ಪತ್ರೆ ಗೆ ತೆರಳಿದ್ದು, ವೈದ್ಯಕೀಯ ಪರೀಕ್ಷೆಗೊಳಗಿದ್ದಾರೆ ಎಂದು ಅವರ ಕಚೇರಿ ತಿಳಿಸಿದೆ.
73ರ ಹರೆಯದ ನೆತನ್ಯಾಹು ಟೆಲ್ ಹ್ಯಾಶೋಮರ್ನಲ್ಲಿರುವ ಶೆಬಾ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ್ದು, ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದೆ .
ನೆತನ್ಯಾಹು ಕಚೇರಿ ಮಾಹಿತಿಯಂತೆ ಶೆಬಾದಲ್ಲಿದ್ದಾರೆ. ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದ್ದು ವೈದ್ಯಕೀಯ ಪರೀಕ್ಷೆಗೊಳಗಾಗಿದ್ದಾರೆ ಎಂದು ಅವರು ಹೇಳಿದ್ದಾರೆ.