ದೇವರ ಮೆರವಣಿಗೆ ವೇಳೆ ಅವಘಡ: ವಿದ್ಯುತ್‌ ತಗುಲಿ ಐವರ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಧಾರ್ಮಿಕ ಮೆರವಣಿಗೆಯ ವೇಳೆ ವಿದ್ಯುತ್‌ ತಗುಲಿ ಐವರು ಕನ್ವರ್ ಯಾತ್ರಾರ್ಥಿಗಳು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಮೀರತ್‌ ಜಿಲ್ಲೆ ರಾಲಿ ಚೌಹಾಣ್‌ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಕನ್ವರ್‌ ಯಾತ್ರೆ ಹಿನ್ನೆಲೆಯಲ್ಲಿ ಹರಿದ್ವಾರದ ಪವಿತ್ರ ಗಂಗಾ ನದಿಯ ನೀರು ತಂದು, ಗ್ರಾಮದಲ್ಲಿ ವಾಹನದಲ್ಲಿ ದೇವರ ಮೆರವಣಿಗೆ ಮಾಡಲಾಗುತ್ತಿತ್ತು. ಇದೇ ವೇಳೆ ಹೈ ವೋಲ್ಟೇಜ್‌ ಇರುವ ವಿದ್ಯುತ್‌ ತಂತಿ ಸ್ಪರ್ಶಿಸಿದ ಕಾರಣ ಭಾರಿ ಪ್ರಮಾಣದಲ್ಲಿ ಶಾಕ್‌ ಸರ್ಕ್ಯೂಟ್‌ ಆಗಿದೆ. ಇದರಿಂದ ಹಲವರು ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಾಗಿಸಲಾಗಿದ್ದು, ಇವರಲ್ಲಿ ಐವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಬಳಿಕ ಹತ್ತು ಕನ್ವರ್‌ಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಲ್ಲಿ ಐವರು ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.

ಈ ದುರಂತವು ಗ್ರಾಮಸ್ಥರಲ್ಲಿ ಆಕ್ರೋಶವನ್ನು ಹುಟ್ಟುಹಾಕಿತು, ರಸ್ತೆ ತಡೆದು ಪ್ರತಿಭಟಿಸಿದರು. ಅಪಘಾತಕ್ಕೆ ಕಾರಣರಾದ ವಿದ್ಯುತ್ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!