ಎನ್‌ಡಿಎ ಸೇರ್ಪಡೆಯಾದ ಅಖಿಲೇಶ್ ಸ್ನೇಹಿತ ರಾಜ್‌ಭರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಉತ್ತರ ಪ್ರದೇಶದಲ್ಲಿ ಅಖಿಲೇಶ್ ಯಾದವ್ ಪಕ್ಷದ ಮಾಜಿ ನಾಯಕ ಒಪಿ ರಾಜ್‌ಭರ್ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ನೇತೃತ್ವದ ಎನ್‌ಡಿಎಗೆ ಎಸ್‌ಬಿಎಸ್‌ಪಿ ಮುಖ್ಯಸ್ಥ ಒಪಿ ರಾಜ್‌ಭರ್ ಔಪಚಾರಿಕವಾಗಿ  ಸೇರ್ಪಡೆಯಾಗಿರುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿಯಲ್ಲಿ ಹೇಳಿದ್ದಾರೆ.

ರಾಜ್‌ಭರ್‌ ಆಗಮನದಿಂದ ಉತ್ತರ ಪ್ರದೇಶದಲ್ಲಿ ಎನ್‌ಡಿಎ ಬಲಗೊಳ್ಳಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ. “ನಾನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೇನೆ ಮತ್ತು ನಾವು 2024 ರ ಚುನಾವಣೆಯಲ್ಲಿ ಒಟ್ಟಿಗೆ ಸ್ಪರ್ಧಿಸಲು ನಿರ್ಧರಿಸಿದ್ದೇವೆ. ನಮ್ಮನ್ನು ಎನ್‌ಡಿಎಗೆ ಸೇರಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ” ಎಂದು ರಾಜ್‌ಭರ್ ಹೇಳಿದ್ದಾರೆ.

2017ರಲ್ಲಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಎಸ್‌ಬಿಎಸ್‌ಪಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿತ್ತು. ರಾಜ್‌ಭರ್ 2019ರವರೆಗೆ ಯೋಗಿ ಆದಿತ್ಯನಾಥ್ ಅವರ ಸಂಪುಟದಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಈ ಹಿಂದೆ ಸಮ್ಮಿಶ್ರ ವಿರೋಧಿ ಚಟುವಟಿಕೆಗಳಿಂದಾಗಿ ಅವರನ್ನು ವಜಾಗೊಳಿಸಲಾಗಿತ್ತು. ಕಳೆದ ವರ್ಷ ಜುಲೈನಲ್ಲಿ ಎಸ್‌ಪಿ ಜೊತೆಗಿನ ಮೈತ್ರಿಯನ್ನು ಓಂ ಪ್ರಕಾಶ್ ರಾಜ್‌ಭರ್ ಕೊನೆಗೊಳಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!