ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಸ್‌ಯುವಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಆರು ಮಂದಿ ಮೃತಪಟ್ಟಿದ್ದು, ಒಬ್ಬರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಸಾಗರ್ ನಗರದಲ್ಲಿ ನಡೆದಿದೆ.
ಸನೋಧಾ ಪೊಲೀಸ್ ಠಾಣೆ ವ್ಯಾಪ್ತಿಯ ಸಾಗರ್-ಜಬಲ್‌ಪುರ ರಸ್ತೆಯ ಬಮೋರಿ ದೂದರ್ ಬಳಿ ಈ ಘಟನೆ ಸಂಭವಿಸಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಏಳು ಜನರಲ್ಲಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.