ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ಓರ್ವ ವ್ಯಕ್ತಿ ಸಾವು, ಮೂವರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವರುಣನ ಅಬ್ಬರಕ್ಕೆ ತತ್ತರಿಸಿದ ಉತ್ತರ ಭಾರತ ಸಹಜ ಸ್ಥಿತಿಯತ್ತ ಮರಳುತ್ತಿದ್ದು, ಈ ಕ್ಷಣ ಹಿಮಾಚಲ ಪ್ರದೇಶದ (Himachal Pradesh) ಕುಲು ಜಿಲ್ಲೆಯ (Kullu district) ಕಿಯಾಸ್ ಮತ್ತು ನ್ಯೋಲಿಯಲ್ಲಿ ಸೋಮವಾರ ಮೇಘಸ್ಫೋಟ (Cloudburst) ಸಂಭವಿಸಿದೆ.

ಮೇಘಸ್ಪೋಟದಿಂದ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ.ಮೂವರಿಗೆ ಗಾಯವಾಗಿದ್ದು, 9 ವಾಹನಗಳು ಕೂಡ ಜಖಂಗೊಂಡಿವೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಠಾಕೂರ್ ತಿಳಿಸಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಲ್ಕು ಜಿಲ್ಲೆಗೆ ಆರೆಂಜ್ ಅಲರ್ಟ್ (Orange Alert) ಘೋಷಣೆ ಮಾಡಲಾಗಿದೆ.

ಇನ್ನು ಉತ್ತರಾಖಂಡನ 14 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಆಗಿದ್ದು, ಹರಿದ್ವಾರದಲ್ಲಿ ಗಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನದಿ ಪಾತ್ರದ ಜನರು ಬೇರೆಡೆಗೆ ಸ್ಥಳಾಂತರವಾಗಲು ಸೂಚನೆ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!