ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ವಿಧಾನಸಭೆಯಲ್ಲಿ ಇಂದು ಎಪಿಎಂಸಿ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ.
ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆದು ಕರ್ನಾಟಕ ಎಪಿಎಂಸಿ ಮೂಲಕ ಕಾಯ್ದೆಯನ್ನು ಮತ್ತಷ್ಟು ಸುಧಾರಣೆಗಳೊಂದಿಗೆ ಮರು ಜಾರಿಗೊಳಿಸಲು ಸರ್ಕಾರ ಮುಂದಾಗಿದೆ.
ಈ ವೇಳೆ ‘ಎಪಿಎಂಸಿ’ ತಿದ್ದುಪಡಿ ವಿಧೇಯಕ ಅಂಗೀಕಾರ ವಿರೋಧಿಸಿ ವಿಪಕ್ಷಗಳು ಸದನದಲ್ಲಿ ಧರಣಿ ನಡೆಸಿದೆ.
ಕೇಂದ್ರ ಸರ್ಕಾರ ನಾಲ್ಕು ವಿವಾದಿತ ಕೃಷಿ ಕಾಯ್ದೆ ಹಿಂಪಡೆದರೂ ರಾಜ್ಯದಲ್ಲಿ ಬಿಜೆಪಿ ಎಪಿಎಂಸಿಗೆ ಸಂಬಂಧಿಸಿದ ತಿದ್ದುಪಡಿ ಕಾಯ್ದೆ ಹಿಂಪಡೆದುಕೊಂಡಿರಲಿಲ್ಲ. ಕೇಂದ್ರ ಸರ್ಕಾರದ ಕಾಯ್ದೆಗೆ ಅನುಗುಣವಾಗಿ ರಾಜ್ಯದ ರೈತರು ಎಪಿಎಂಸಿಯಲ್ಲಿ ಅಥವಾ ಎಪಿಎಂಸಿಯಿಂದ ಹೊರಗೆ ಎಲ್ಲಿ ಬೇಕಾದರೂ ತಮ್ಮ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಬಹುದಾಗಿತ್ತು.
ಇದೀಗ ಎಪಿಎಂಸಿ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ.