ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿ 66 ರ ಹೆಜಮಾಡಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರನ್ನು ಸುಮಾರು ಒಂದು ಕಿ.ಮೀ. ದೂರದವರೆಗೂ ಟಿಪ್ಪರ್ ಎಳೆದೊಯ್ದಿದ್ದು, ಟಿಪ್ಪರ್ ಚಾಲಕನ ಬೇಜವಾಬ್ದಾರಿಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಉಡುಪಿಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಸಂದರ್ಭ ಹೆಜಮಾಡಿಯ ಕನ್ನಂಗಾರು ಬೈಪಾಸ್ ಪರಿಸರದಲ್ಲಿ ಸ್ಯಾಂಟ್ರೋ ಕಾರೊಂದು ಟಿಪ್ಪ ಹಿಂಬದಿಯಿಂದ ಡಿಕ್ಕಿ ಹೊಡೆದು ಸಿಲುಕಿಕೊಂಡಿತ್ತು. ಆದ್ರೆ ಬೇಜವಾಬ್ದಾರಿಯ ಚಾಲನೆಯಿಂದ ಟಿಪ್ಪರ್ ಚಾಲಕನು ಸುಮಾರು ಒಂದು ಕಿಲೋ ಮೀಟರ್ ದೂರದವರೆಗೆ ಎಳೆದೊಯ್ದಿದ್ದು, ಹಿಂಬದಿಯಿಂದ ಬಂದ ಮತ್ತೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಈ ಬಗ್ಗೆ ಟಿಪ್ಪರ್ ಚಾಲಕನ ಗಮನಕ್ಕೆ ತಂದು ನಿಲ್ಲಿಸುವ ಪ್ರಯತ್ನ ಮಾಡಿದ್ದು, ಕೊನೆಗೂ ಹೆಜಮಾಡಿ ಟೋಲ್ ಗೇಟ್ ಬಳಿ ಟಿಪ್ಪರನ್ನು ನಿಲ್ಲಿಸಿದ್ದಾರೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಾಗರ ಮೂಲದ ಜಾಫರ್ ಖಾನ್, ಶಾಹಿನಾ, ಯಾಸಿರ್ ಖಾನ್ ಗಾಯಗೊಂಡಿದ್ದು, ಅವರನ್ನು ಸುರತ್ಕಲ್‌ನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಪಡುಬಿದ್ರಿ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದು, ಕಾರು ಮತ್ತು ಟಿಪ್ಪರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.