Saturday, December 20, 2025

ಕೇವಲ 16 ಎಸೆತದಲ್ಲಿ ಹಾಫ್ ಸೆಂಚುರಿ: ವಿಶೇಷ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್:


ದಕ್ಷಿಣ ಆಫ್ರಿಕಾ ವಿರುದ್ಧದ ಐದನೇ ಟಿ20 ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಸ್ಫೋಟಕ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ.

ನಾಯಕ ಸೂರ್ಯಕುಮಾರ್ ಯಾದವ್ ಔಟಾದ ಬಳಿಕ ಕ್ರೀಸ್​ಗೆ ಬಂದ ಹಾರ್ದಿಕ್, ಮೊದಲ ಎಸೆತದಿಂದಲೇ ಬೌಂಡರಿ ಸಿಕ್ಸರ್‌ಗಳ ಮಳೆ ಸುರಿಸಲು ಶುರು ಮಾಡಿದರು. ಇದರ ಪರಿಣಾಮವಾಗಿ ಪಾಂಡ್ಯ, ಕೇವಲ 16 ಎಸೆತಗಳಲ್ಲಿ 50 ರನ್​ಗಳ ಗಡಿ ದಾಟಿದರು.

ಕೇವಲ 16 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನ ಅತಿ ವೇಗದ ಅರ್ಧಶತಕ ಬಾರಿಸಿದ ಎರಡನೇ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಪಾಂಡ್ಯಗೂ ಮೊದಲು 2007 ರ ಟಿ20 ವಿಶ್ವಕಪ್‌ನಲ್ಲಿ ಯುವರಾಜ್ ಸಿಂಗ್ ಇಂಗ್ಲೆಂಡ್ ವಿರುದ್ಧ ಕೇವಲ 12 ಎಸೆತಗಳಲ್ಲಿ 50 ರನ್ ಬಾರಿಸಿದರು. ಇದು ಈವರೆಗಿನ ದಾಖಲೆಯಾಗಿದೆ.

ಭಾರತದ ಪರ ಅತಿ ವೇಗದ ಅಂತಾರಾಷ್ಟ್ರೀಯ ಅರ್ಧಶತಕ ಸಿಡಿಸಿದ ದಾಖಲೆಯ ಪಟ್ಟಿಯಲ್ಲಿ ಯುವರಾಜ್ ಸಿಂಗ್ ಅಗ್ರಸ್ಥಾನದಲ್ಲಿದ್ದರೆ, ಇದೀಗ ಹಾರ್ದಿಕ್ ಪಾಂಡ್ಯ ಎರಡನೇ ಸ್ಥಾನಕ್ಕೇರಿದ್ದಾರೆ. ಮೂರನೇ ಸ್ಥಾನದಲ್ಲಿರುವ ಆರಂಭಿಕ ಅಭಿಷೇಕ್ ಶರ್ಮಾ 17 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು. 18 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದ ಕೆಎಲ್ ರಾಹುಲ್ 4ನೇ ಸ್ಥಾನದಲ್ಲಿದ್ದರೆ, 18 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದ ಸೂರ್ಯಕುಮಾರ್ ಯಾದವ್ 5ನೇ ಸ್ಥಾನದಲ್ಲಿದ್ದಾರೆ.

error: Content is protected !!