Saturday, December 20, 2025

ಈಶಾನ್ಯ ರಾಜ್ಯಗಳ ವಾಯುಯಾನ ಇತಿಹಾಸದಲ್ಲಿ ಮಹತ್ವದ ಹೆಜ್ಜೆ: ನಾಳೆ ಪ್ರಧಾನಿ ಮೋದಿಯಿಂದ ಅತಿದೊಡ್ಡ ವಿಮಾನ ನಿಲ್ದಾಣ ಲೋಕಾರ್ಪಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಡಿಸೆಂಬರ್ 20) ಈಶಾನ್ಯ ರಾಜ್ಯದ ಅತಿದೊಡ್ಡ ವಿಮಾನ ನಿಲ್ದಾಣದ ಟರ್ಮಿನಲ್ ಅನ್ನು ಉದ್ಘಾಟಿಸಲಿದ್ದಾರೆ.


ಅಸ್ಸಾಂನ ಗುವಾಹಟಿಯಲ್ಲಿ ಲೋಕಪ್ರಿಯ ಗೋಪಿನಾಥ್ ಬೋರ್ಡೊಲೊಯ್ ಅಂತಾರಾಷ್ಟ್ರೀಯ (ಎಲ್‌ಜಿಬಿಐ) ವಿಮಾನ ನಿಲ್ದಾಣ ಲೋಕಾರ್ಪಣೆಗೊಳ್ಳಲಿದ್ದು ಇದು ಅಸ್ಸಾಂ ಮತ್ತು ಈಶಾನ್ಯದ ವಾಯುಯಾನ ಇತಿಹಾಸದಲ್ಲಿ ಮಹತ್ವದ ಹೆಜ್ಜೆಯಾಗಿದೆ. ಇದು ಈಶಾನ್ಯ ರಾಜ್ಯಗಳ ಪ್ರವಾಸೋದ್ಯಮದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತದೆ.

ಈ ಕುರಿತು ಪ್ರಧಾನಿ ಮೋದಿ ಪೋಸ್ಟ್ ಮಾಡಿದ್ದು , ಇದು ಅಸ್ತಿತ್ವದಲ್ಲಿರುವ ಟರ್ಮಿನಲ್‌ಗಿಂತ 7 ಪಟ್ಟು ದೊಡ್ಡದಾಗಿದೆ.’ ನಾನು ನಾಳೆ ಅಸ್ಸಾಂನ ಗುವಾಹಟಿಯನ್ನು ತಲುಪುತ್ತೇನೆ. ಅಲ್ಲಿ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಲಾಗುವುದು. ಇದು ಅಸ್ಸಾಂನ ಮೂಲಸೌಕರ್ಯಕ್ಕೆ ಪ್ರಮುಖ ಉತ್ತೇಜನ ನೀಡುತ್ತದೆ’ ಎಂದು ಹೇಳಿದ್ದಾರೆ.

error: Content is protected !!