ಹೈಕೋರ್ಟ್ ನ ಭಿನ್ನ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಮೊರೆಹೋದ ಸೆಂಥಿಲ್ ಬಾಲಾಜಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿಯಿಂದ ಬಂಧನಕ್ಕೊಳಗಾಗಿರುವ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರು ಮದ್ರಾಸ್ ಹೈಕೋರ್ಟ್ ನ ಭಿನ್ನ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಹೈಕೋರ್ಟ್ ನ್ಯಾಯಮೂರ್ತಿಗಳಾದ ನಿಶಾ ಬಾನು ಮತ್ತು ಡಿ ಭರತ ಚಕ್ರವರ್ತಿ ಅವರು ಸೆಂಥಿಲ್ ಬಾಲಾಜಿ ಅವರ ಬಂಧನಕ್ಕೆ ಸಂಬಂಧಿಸಿ ವಿಭಿನ್ನ ತೀರ್ಪು ನೀಡಿದ್ದರು. ನ್ಯಾಯಮೂರ್ತಿ ನಿಶಾ ಬಾನು ಅವರು ಬಾಲಾಜಿ ಬಿಡುಗಡೆಗಾಗಿ ಸಲ್ಲಿಸಲಾದ ಹೇಬಿಯಸ್ ಕಾರ್ಪಸ್ ಮನವಿ ಸಮರ್ಥನೀಯವಾಗಿದೆ, ಅವರನ್ನು ಬಿಡುಗಡೆ ಮಾಡಬಹುದು ಎಂದು ಹೇಳಿದ್ದರು. ಆದರೆ ನ್ಯಾಯಮೂರ್ತಿ ಡಿ ಭರತ ಚಕ್ರವರ್ತಿ ಅವರು ನ್ಯಾ. ಬಾನು ಅವರ ಅಭಿಪ್ರಾಯವನ್ನು ಒಪ್ಪಲು ಸಾಧ್ಯವಿಲ್ಲ, ಎದೆನೋವಿಗೆ ಚಿಕಿತ್ಸೆ ಪಡೆಯುತ್ತಿರುವ ಬಾಲಾಜಿ ಆಸ್ಪತ್ರೆಯಲ್ಲಿರುವಷ್ಟು ದಿನ ಇಡಿ ಕಸ್ಟಡಿಯಿಂದ ಹೊರಗಿರಲಿದ್ದಾರೆ. ಅಷ್ಟರೊಳಗೆ ಬಾಲಾಜಿ ಫಿಟ್ ಆಗಿದ್ದರೆ ಹತ್ತು ದಿನಗಳಲ್ಲಿ ಮತ್ತೆ ಇಡಿ ಕಸ್ಟಡಿಗೆ ತೆರಳಬಹುದು ಎಂದು ಹೇಳಿದ್ದರು,

ಹೀಗಾಗಿ ಸೆಂಥಿಲ್ ಬಾಲಾಜಿ ಹಾಗೂ ಅವರ ಪತ್ನಿ ಮೇಗಾಲಾ ಕೂಡ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!