ವಿಧಾನಸಭಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಬಿಜೆಪಿ, ಜೆಡಿಎಸ್ ಶಾಸಕರ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ವಿಧಾನಸಭೆಯಲ್ಲಿ ಸದನದ ವಿಶ್ವಾಸವನ್ನು ಕಳೆದುಕೊಂಡಿರುವ ಸಭಾದ್ಯಕ್ಷರನ್ನು ಕೂಡಲೇ ವಜಾಗೊಳಿಸಲು ಅವಿಶ್ವಾಸ ನಿರ್ಣಯವನ್ನು ಕೈಗೊಳ್ಳುವಂತೆ ಬಿಜೆಪಿ, ಜೆಡಿಎಸ್ ಶಾಸಕರು ಆಗ್ರಹಿಸಿದ್ದಾರೆ.

ಇಂದು ಉಪಾಧ್ಯಕ್ಷರಾಗಿದ್ದ ರುದ್ರಪ್ಪ ಲಮಾಣಿ ಅವರು ಸಭಾಧ್ಯಕ್ಷ ಯು.ಟಿ. ಖಾದರ್‌ ಅವರ ಅನುಪಸ್ಥಿತಿಯಲ್ಲಿ ಸದನವನ್ನು ಮುನ್ನಡೆಸುತ್ತಿದ್ದರು.ಈ ವೇಳೆ ಸದನದಲ್ಲಿ ಕೆಲ ಶಾಸಕರು ಸರ್ಕಾರದ ಬಿಲ್‌ ಮಂಡನೆಗೆ ಬಿಡದೇ ಅದರ ಪ್ರತಿಯನ್ನು ಹರಿದು ಹಾಕಿ ಬೀಸಾಡಿದ್ದಾರೆ. ಈ ಕ್ಷಣ ಸದನದ ವಿಶ್ವಾಸವನ್ನು ಕಳೆದುಕೊಂಡಿರುವ ಸಭಾದ್ಯಕ್ಷರನ್ನು ಕೂಡಲೇ ವಜಾಗೊಳಿಸಲು ಅವಿಶ್ವಾಸ ನಿರ್ಣಯವನ್ನು ಕೈಗೊಳ್ಳುವಂತೆ ಶಾಸಕರು ಆಗ್ರಹಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರ ರಚನೆಯಾಗಿ ಇನ್ನೂ ಎರಡು ತಿಂಗಳು ಅಧಿಕಾರ ಪೂರ್ಣಗೊಳಿಸಿಲ್ಲ. ಆಕಳೆದ ಒಂದೂವರೆ ತಿಂಗಳ ಹಿಂದೆ ವಿಧಾನಸಭಾ ಸ್ಪೀಕರ್‌ ಆಗಿ ಆಯ್ಕೆಯಾಗಿರುವ ಯು.ಟಿ. ಖಾದರ್‌ ಅವರು ಸದಸನದ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ. ಹೀಗಾಗಿ, ಅವರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ ಮಾಡಲು ಅವಕಾಶ ನೀಡುವಂತೆ ರಾಜ್ಯ ವಿಧಾನಸಭಾ ಕಾರ್ಯದರ್ಶಿಗಳಿಗೆ ಬಿಜೆಪಿ ಮತ್ತು ಜೆಡಿಎಸ್‌ ಶಾಸಕರು ಪತ್ರವನ್ನು ಬರೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!