ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸರ್ಕಾರ ಘೋಷಿಸಿದ ಗ್ಯಾರೆಂಟಿಗಳ ಪೈಕಿ ಬಹಳಷ್ಟು ಕಾತುರರಿಂದ ಕಾಯುತ್ತಿದ್ದ ಮನೆಯ ಯಜಮಾನಿಯರ ಪಾಲಿಗೆ ಒದಗಿರುವ ಹಣಕಾಸಿನ ಹೊಸ ನೆರವು ʼಗೃಹಲಕ್ಷ್ಮಿ ಯೋಜನೆʼಗೆ ಇಂದಿನಿಂದ ಅರ್ಜಿ ಸಲ್ಲಿಸುವ ಅವಕಾಶ ನೀಡಲಾಗಿದೆ.
ರಾಜ್ಯದ ಪ್ರತಿ ಕುಟುಂಬದ ಯಜಮಾನಿ ಮಹಿಳೆಯರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ನೋಂದಣಿಗೆ ಆಧಾರ್ ಕಾರ್ಡ್, ಪಡಿತರ ಚೀಟಿ, ಮೊಬೈಲ್ ನಂಬರ್ ಅಗತ್ಯವಿದ್ದು, ಬೆಂಗಳೂರು ಇನ್, ಗ್ರಾಮ ಒನ್, ಕರ್ನಾಟಕ ಒನ್, ಬಾಪುಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಇಂದಿನಿಂದ ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಸದ್ಯ ಒಟ್ಟು 1.28 ಕೋಟಿಯಷ್ಟು ಗೃಹಲಕ್ಷ್ಮಿ ಫಲಾನುಭವಿಗಳಿದ್ದು, ಇಂದಿನಿಂದ ಗೃಹ ಲಕ್ಷ್ಮಿ ಯೋಜನೆಗೆ ನೊಂದಣಿ ಮಾಡಿಕೊಳ್ಳಬಹುದು.