ಹೊಸದಿಗಂತ ವರದಿ, ಕಲಬುರಗಿ:
ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಚಿಂಚೋಳಿ ತಾಲೂಕಿನ ಎತ್ತಿಪೋತ ಜಲಪಾತ ಮೈದುಂಬಿ ಹರಿಯುತ್ತಿದೆ.
ಕಳೆದ ಒಂದುವರೇ ತಿಂಗಳಿನಿಂದ ಮಳೆ ಇಲ್ಲದೆ ಬರಿದಾಗಿದ್ದ ಎತ್ತಿಪೋತ ಜಲಪಾತ ಇಂದು ಮಳೆಯಿಂದಾಗಿ ಉಕ್ಕಿ ಹರಿಯಲಾರಂಭಿಸಿದೆ.
ಇನ್ನೂ ಕಳೆದ ರಾತ್ರಿಯಿಂದಲೇ ಚಿಂಚೋಳಿ ಹಾಗೂ ತೆಲಂಗಾಣದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜಲಪಾತಕ್ಕೆ ಜೀವ ಬಂದಂತಾಗಿದೆ.
ಮಳೆಗಾಲದಲ್ಲಿ ಕಲಬುರಗಿ, ಬೀದರ್ ಮತ್ತು ತೆಲಂಗಾಣದ ಪ್ರವಾಸಿಗರನ್ನು ಆಕರ್ಷಿಸುವ ಎತ್ತಿಪೋತ ಫಾಲ್ಸ್, ನೀರಿನಿಂದ ತುಂಬಿ ತುಳುಕುತ್ತಿದೆ.
ನಗರ ಪ್ರದೇಶ ಸೇರಿದಂತೆ ಜಿಲ್ಲೆಯಾದ್ಯಂತ ರಾತ್ರಿಯಿಂದ ಮತ್ತೆ ಮಳೆ ಪ್ರಾರಂಭವಾಗಿದ್ದು, ಬಿಟ್ಟುಬಿಡದೆ ಸುರಿಯುತ್ತಿದೆ. ಇದರಿಂದ ನಗರದ ಪ್ರಮುಖ ರಸ್ತೆಗಳಲ್ಲಿರುವ ಚರಂಡಿಗಳು ತುಂಬಿ ಹರಿಯುತ್ತಿವೆ.