ಮಹಾರಾಷ್ಟ್ರದಲ್ಲಿ ಮುಂದುವರಿದ ಮಳೆಯ ಅರ್ಭಟ: ಬೆಳಗಾವಿಯಲ್ಲಿ ಎದುರಾಗಿದೆ ಪ್ರವಾಹ ಭೀತಿ!

ಹೊಸ ದಿಗಂತ ವರದಿ, ಬೆಳಗಾವಿ:

ನೆರೆಯ ಮಹಾರಾಷ್ಟ್ರದಲ್ಲಿ ಮಳೆಯ ಅರ್ಭಟ ಮುಂದುವರಿದ ಹಿನ್ನೆಲೆ ಜಿಲ್ಲೆಯಲ್ಲಿ ಮತ್ತೆ ನದಿಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ.
ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಕಳೆದ ನಾಲ್ಕ ಐದು ದಿನಗಳಿಂದ ಎಡೆಬಿಡದೆ ಮಳೆಯ ಧಾರಾಕಾರವಾಗಿ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ನದಿಗಳಾದ ಕೃಷ್ಣ, ಮಲಪ್ರಭಾ, ಘಟಪ್ರಭಾ, ಹಿರಣ್ಯಕೇಶಿ ನದಿಗಳು ತುಂಬಿ ಹರಿಯುತ್ತಿವೆ.

ಪೊಲೀಸ ಬಂದೋಬಸ್ತ್
ಗುರುವಾರ ಬೆಳಿಗ್ಗೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ವೇದಗಂಗಾ ನದಿಯ ಜತ್ರಾಟ ಮತ್ತು ಭೀವಂಶಿ ನಡುವಿನ ಸೇತುವೆ ಮೇಲೆ ಒಂದು ಅಡಿ ನೀರು ಹರಿಯುತ್ತಿದ್ದು, ಇಲ್ಲಿ ನಾಗರಿಕರು ಸಂಚರಿಸದಂತೆ ಪೊಲೀಸ ಬಂದೋಬಸ್ತ್ ಮಾಡಲಾಗಿದೆ.

ಅದರಂತೆ ಕಾಗವಾಡ ತಾಲೂಕಿನ ರಾಜಾಪೂರ ಮಂಗಾವತಿ ನಡುವಿನ ಸೇತುವೆ ಮೇಲೆ ನೀರು ಹರಿಯುತ್ತಿದೆ. ಅದೇ ರೀತಿ ಗೋಕಾಕ ತಾಲೂಕಿನ ಗೋಕಾಕ ಮತ್ತು ಸಿಂಗಳಾಪೂರ ನಡುವಿನ ಸೇತುವೆ ಜಲಾವೃತ ಆಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ಜಿಲ್ಲೆಯಾದ್ಯಂತ 83 ಸೇತುವೆಗಳ ಮೇಲೆ ಜಿಲ್ಲಾ ಪೊಲೀಸರು ನಿಗಾ ವಹಿಸುತ್ತಿದ್ದಾರೆ. ನದಿಗಳಷ್ಟೇ ಅಲ್ಲ, ಅನೇಕ ಹಳ್ಳಗಳನ್ನೂ ವೀಕ್ಷಿಸಲಾಗುತ್ತಿದೆ ಎಂದರು.

ರಸ್ತೆ ಮಟ್ಟದವರೆಗೆ ನೀರು ಏರುವುದು ಕಂಡುಬಂದಲ್ಲಿ ಸೇತುವೆಗಳನ್ನು ಬಳಸದಂತೆ ಅವರು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!