ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಾದಗಿರಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ.
ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಇಂದು ಕೂಡ ಮಳೆ ಹೆಚ್ಚಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಮಕ್ಕಳ ಹಿತದೃಷ್ಟಿಯಿಂದ ಶಾಲೆಗಳಿಗೆ ರಜೆ ನೀಡಲಾಗಿದೆ.
ಯಾದಗಿರಿ, ಸುರಪುರ, ಹುಣಸಗಿ, ಶಹಾಪುರ, ವಡಗೇರಾ ಹಾಗೂ ಗುರುಮಠಕಲ್ ತಾಲೂಕಿನಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.