ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರದಲ್ಲಿ ಹಿಂಸಾಚಾರ ಆಗುತ್ತಿದ್ದರೆ. ಅತ್ತ ಬೆತ್ತಲೇ ವಿಡಿಯೋ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ದೇಶ ದ ಮೂಲೆ ಮೂಲೆಯಲ್ಲಿ ಘಟನೆ ಖಂಡಿಸಿ ಪ್ರತಿಭಟನೆಗಳು ನಡೆಯುತ್ತಿದೆ.
ಈ ಘಟನೆ ಕುರಿತು ಖುದ್ದು ಸಂತ್ರಸ್ತೆ ಪತಿ ಪ್ರತಿಕ್ರಿಯೆ ನೀಡಿದ್ದು, ಕಾರ್ಗಿಲ್ ಯುದ್ಧದಲ್ಲಿ ಹೋರಾಡಿ ದೇಶದ ಗಡಿಯನ್ನು ಕಾಪಾಡಿದ್ದೆ. ಶ್ರೀಲಂಕಾದಲ್ಲಿ ನಡೆದ ಭಾರತೀಯ ಸೇನೆಯ ಶಾಂತಿ ಸ್ಥಾಪನೆ ಆಂದೋಲನದಲ್ಲಿ ಭಾಗಿಯಾಗಿ ಸೇವೆ ಸಲ್ಲಿಸಿದ್ದೆ. ಆದರೆ ದೇಶವನ್ನು ಉಳಿಸಿದ ನನಗೆ ನನ್ನ ಪತ್ನಿ, ಮನೆ ಹಾಗೂ ಗ್ರಾಮಸ್ಥರನ್ನು ಕಾಪಾಡಲು ಸಾಧ್ಯವಾಗಲಿಲ್ಲ ಎಂದು ಕಣ್ಣೀರು ಹಾಕಿದ್ದಾರೆ.
ಅಸ್ಸಾಂ ರಿಜಿಮೆಂಟ್ನಲ್ಲಿ ಸುಬೇದಾರ್ ಆಗಿ ಸೇವೆ ಸಲ್ಲಿಸಿದ್ದ ಯೋಧ, ಪಾಕಿಸ್ತಾನ ವಿರುದ್ಧ ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ್ದರ. ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡಿದ ಯೋಧ, ತನ್ನ ಪತ್ನಿ, ಮನೆ ಕುಟುಂಬಸ್ಥರನ್ನು ಕಾಪಾಡಲು ಸಾಧ್ಯವಾಗಲಿಲ್ಲ ಅನ್ನೋ ಕೊರಗು ಕಾಡುತ್ತಿದೆ ಎಂದು ನಿವೃತ್ತ ಯೋಧ ಹೇಳಿದ್ದಾರೆ.
ಘಟನೆಗೂ ಮೊದಲು ಪೊಲೀಸರು ಸ್ಥಳದಲ್ಲಿದ್ದರು. ಈ ಘಟನೆಯನ್ನು ತಡೆಯುವ ಎಲ್ಲಾ ಸಾಧ್ಯತೆಗಳು ಪೊಲೀಸ ಕೈಯಲ್ಲಿತ್ತು. ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಈ ಘಟನೆ ಹಿಂದಿರುವ ಎಲ್ಲಾ ದುಷ್ಕರ್ಮಿಗಳಿಗೆ ಅತ್ಯಂತ ಕಠಿಣ ಶಿಕ್ಷೆಯಾಗಬೇಕು ಎಂದು ನಿವೃತ್ತ ಯೋಧ ಆಗ್ರಹಿಸಿದ್ದಾರೆ. ನಮ್ಮ ಕುಟುಂಬಕ್ಕೆ ಭದ್ರತೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.